ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ನಾಗರಹಳ್ಳಿಯಲ್ಲಿ ನಾಗರ ಪಂಚಮಿಯ ಅಂಗವಾಗಿ ಇಂದು ಶ್ರೀನಾಗೇಂದ್ರ ಸ್ವಾಮಿಯ ಜಾತ್ರಾ ಮಹೋತ್ಸವಗಿವು ಶ್ರದ್ದಾಭಕ್ತಿಯಿಂದ ಜರುಗಿತು.
ವರ್ಷದಲ್ಲಿ ಎರಡು ಬಾರಿ ಬರುವ ನಾಗರ ಪಂಚಮಿಯಂದು ಈ ಜಾತ್ರಾ ಮಹೋತ್ಸವ ಜರುಗುವುದು ಇಲ್ಲಿನ ವಿಶೇಷವಾಗಿದೆ. ಮುಂಜಾನೆ ಬ್ರಾಹ್ಮಿ ಮೂಹರ್ತದಲ್ಲಿ ಶ್ರೀನಾಗೇಂದ್ರ ಸ್ವಾಮಿಗೆ ಎಳನೀರು, ಕ್ಷೀರ, ಪಂಚಾಮೃತ ಅಭಿಷೇಕ, ಪವಮಾನ ಪೂಜೆ, ವಿಶೇಷ ಹೂವಿನ ಅಲಂಕಾರ ಪೂಜೆ, ಮಹಾಮಂಗಳಾರತಿ ಜರುಗಿತು.
ಈ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಭಕ್ತರು ಸರತಿ ಸಾಲಿನಲ್ಲಿ ನಿಂತು ನಾಗೇಂದ್ರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಹರಕೆ ಕಾಣಿಕೆ, ಹಣ್ಣು-ಕಾಯಿ ಸಮರ್ಪಿಸಿ ತೀರ್ಥ ಪ್ರಸಾದ ಸ್ವೀಕರಿಸಿದರು. ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.
ನಾಗರಹಳ್ಳಿ ನಾಗೇಂದ್ರಸ್ವಾಮಿಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗೇರುಗಲ್ಲು ಸತೀಶ್ ಹಾಗೂ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

