Hosanagara

ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು, ರಾಜ್ಯ ಸರ್ಕಾರದ ಕ್ರಮ ಖಂಡಿಸಿ ನ.4ಕ್ಕೆ ರಾಜ್ಯವಾಪ್ತಿ ಬಿಜೆಪಿ ಉಗ್ರ ಪ್ರತಿಭಟನೆ ; ಎಂಎಲ್‌ಸಿ ರುದ್ರೇಗೌಡ

HOSANAGARA ; ಪ್ರಸಕ್ತ ರಾಜ್ಯ ಕಾಂಗ್ರೆಸ್ ಸರ್ಕಾರ ಹಲವು ಸರಣಿ ಹಗರಣಗಳ ಮೂಲಕ ಜನವಿರೋಧಿ ಆಡಳಿತಕ್ಕೆ ಮುಂದಾಗಿದೆ ಎಂದು ವಿಧಾನ ಪರಿಷತ್ತಿನ ಸದಸ್ಯ ರುದ್ರೇಗೌಡ ಆರೋಪಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬಲಿಪಾಡ್ಯಮಿ ದಿನದಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಸಂಸತ್ತಿನ ಕಲಾಪದ ವೇಳೆ ವಕ್ಫ್ ಬೋರ್ಡ್ ಕಾಯ್ದೆ ಕುರಿತಂತೆ ಚರ್ಚೆ ನಡೆದು, ಕಲಾಪದಲ್ಲಿ ಜಂಟಿ ಸಮಿತಿ ರಚಿಸಿ, ಸಮಿತಿಯ ನಿರ್ಧಾರ ಹೊರ ಬೀಳುವ ಮುನ್ನವೇ ರಾಜ್ಯದಲ್ಲಿ ಸಚಿವ ಜಮೀರ್ ಅಹಮದ್ ನೇತೃತ್ವದಲ್ಲಿ ವಕ್ಫ್ ಸಮಿತಿ ಹೆಸರಿನಲ್ಲಿ ರೈತರ ಜಮೀನು ಕಬಳಿಸಲು ಏನೆಲ್ಲಾ ಹುನ್ನಾರ ನಡೆಸಬೇಕು ಅದಕ್ಕೆ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ದೂರಿದರು.

ಈ ಹಿನ್ನಲೆಯಲ್ಲಿ ರಾಜ್ಯದ ಯಾವೊಬ್ಬ ರೈತನು ನೆಮ್ಮದಿಯಿಂದ ಜೀವನ ನಡೆಸುವುದು ಕಷ್ಟವಾಗಿದೆ. ಯಾವ ಘಳಿಗೆಯಲ್ಲಿ ತಮ್ಮ ಪಹಣಿಗಳಲ್ಲಿ ತಮ್ಮ ಹೆಸರು ಹೋಗಿ ವಕ್ಫ್ ಬೋರ್ಡ್ ಎಂದು ನಮೂದಾಗುವುದೋ ಎಂಬ ಆತಂಕದಲ್ಲಿ ರೈತಾಪಿ ವರ್ಗವಿದೆ. ಇದಕ್ಕೆ ಮಠ-ಮಂದಿರಗಳು ಹೊರತಾಗಿಲ್ಲ ಎಂದ ಶಾಸಕ ರುದ್ರೇಗೌಡ, ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಹಲವು ಹಿಂದೂ ದೇವಾಲಯಗಳ ಜಮೀನು ಸಹ ಇಂದು ವಕ್ಫ್ ಬೋರ್ಡ್ ಹೆಸರಿಗೆ ಪಹಣಿಯಲ್ಲಿ ನೊಂದಣಿಯಾಗಿರುವುದು ದುರಂತದ ಸಂಗತಿ ಎಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಪಕ್ಷದ ಹಿರಿಯ ಸಂಸದ ಗೋವಿಂದ ಕಾರಜೋಳ ನೇತೃತ್ವದಲ್ಲಿ ಪಕ್ಷದ ಹಲವು ನಾಯಕರು ಘಟನೆ ನಡೆದ ಸ್ಥಳವಾದ ವಿಜಯಪುರ ಜಿಲ್ಲೆಯ ಕೆಲವು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ, ಪಹಣಿ ಸಮಸ್ಯೆಗಳನ್ನು ರೈತರಿಂದ ಆಲಿಸಿದ್ದು, ಬಿಜೆಪಿ ರಾಜ್ಯಾದ್ಯಂತ ಗಂಭೀರ ಹೋರಾಟಕ್ಕೆ ಮುಂದಾಗಿದೆ. ರಾಜ್ಯದ ಪ್ರತಿ ಮಂಡಲ ವ್ಯಾಪ್ತಿಯಲ್ಲಿ ರೈತರಲ್ಲಿ ಈ ಕುರಿತು ಜಾಗೃತಿ ಮೂಡಿಸಲು ಬಿಜೆಪಿ ಕ್ರಮಕೈಗೊಂಡಿದ್ದು, ಇದೇ ನ.4ರಂದು ರಾಜ್ಯಾದ್ಯಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಪಹಣಿ ತಿದ್ದುಪಡಿ ಕುರಿತಂತೆ ಬೃಹತ್ ಹೋರಾಟ ನಡೆಯಲಿದೆ. ಅಲ್ಪಸಂಖ್ಯಾತ ಸಮುದಾಯವನ್ನು ತುಷ್ಟಿಕರಿಸುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈ ಪ್ರತಿಭಟನೆ ಒಂದು ಎಚ್ಚರಿಕೆ ಘಂಟೆ ಆಗಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ, ಕಾರ್ಯದರ್ಶಿ ಮೋಹನ್ ಮಂಡಾನಿ, ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಎ.ವಿ. ಮಲ್ಲಿಕಾರ್ಜುನ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್, ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಆಲವಳ್ಳಿ ವೀರೇಶ್, ದೇವಾನಂದ್ ಉಮೇಶ್ ಕಂಚುಗಾರ್, ಶಿವಾನಂದ, ಯುವರಾಜ, ನಾಗಾರ್ಜುನ ಸ್ವಾಮಿ, ತೀರ್ಥೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>