ಶಿವಮೊಗ್ಗ ಸುದ್ದಿ

ಆಕಾಶವಾಣಿ ಭದ್ರಾವತಿ–ಶಿವಮೊಗ್ಗ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾಗಿ ನಂದನ್ ಕುಮಾರ್ ಅಧಿಕಾರ ಸ್ವೀಕಾರ

ಆಕಾಶವಾಣಿ ಭದ್ರಾವತಿ–ಶಿವಮೊಗ್ಗ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾಗಿ ನಂದನ್ ಕುಮಾರ್ ಎಲ್.ಓ. ಅಧಿಕಾರ ವಹಿಸಿಕೊಂಡಿದ್ದು, ಸ್ಥಳೀಯ ಪ್ರತಿಭೆ ಮತ್ತು ಪ್ರಾದೇಶಿಕ ಕಾರ್ಯಕ್ರಮಗಳಿಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ.

ಆಕಾಶವಾಣಿ ಭದ್ರಾವತಿ–ಶಿವಮೊಗ್ಗ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾಗಿ ನಂದನ್ ಕುಮಾರ್ ಅಧಿಕಾರ ಸ್ವೀಕಾರ – all india

ಶಿವಮೊಗ್ಗ: ಆಕಾಶವಾಣಿ ಭದ್ರಾವತಿ–ಶಿವಮೊಗ್ಗ ಕೇಂದ್ರದ ನೂತನ ಕಾರ್ಯಕ್ರಮ ಮುಖ್ಯಸ್ಥರಾಗಿ ನಂದನ್ ಕುಮಾರ್ ಎಲ್.ಓ. ಅವರು ಅಧಿಕಾರ ಸ್ವೀಕರಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಪ್ರಸಾರ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿರುವ ನಂದನ್ ಕುಮಾರ್, ಈ ಹಿಂದೆ ಆಕಾಶವಾಣಿ ಬೆಂಗಳೂರು ಕೇಂದ್ರದಲ್ಲಿ ಕಾರ್ಯಕ್ರಮ ನಿರ್ವಾಹಕರಾಗಿ ಸೇವೆ ಸಲ್ಲಿಸಿದ್ದರು. ಇದೀಗ ಭದ್ರಾವತಿ–ಶಿವಮೊಗ್ಗ ಕೇಂದ್ರದ ಕಾರ್ಯಕ್ರಮ ವಿಭಾಗದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಆಕಾಶವಾಣಿಯ ಪ್ರಸಾರ ಗುಣಮಟ್ಟವನ್ನು ಮತ್ತಷ್ಟು ಉತ್ತಮಪಡಿಸುವುದರೊಂದಿಗೆ ಸ್ಥಳೀಯ ಪ್ರತಿಭೆಗಳು ಮತ್ತು ಕಲಾವಿದರಿಗೆ ಹೆಚ್ಚಿನ ಅವಕಾಶ ಕಲ್ಪಿಸುವುದಾಗಿ ತಿಳಿಸಿದರು.

ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಕಲೆ, ಸಾಹಿತ್ಯ, ಸಂಸ್ಕೃತಿ, ಕೃಷಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುವುದು. ಆಯಾ ಜಿಲ್ಲೆಗಳ ಸ್ಥಳೀಯ ವೈಶಿಷ್ಟ್ಯಗಳನ್ನು ಆಕಾಶವಾಣಿ ಕಾರ್ಯಕ್ರಮಗಳ ಮೂಲಕ ಶ್ರೋತೃಗಳಿಗೆ ಪರಿಚಯಿಸುವ ಉದ್ದೇಶವಿದೆ ಎಂದು ಹೇಳಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಶ್ರೋತೃಗಳ ಆಸಕ್ತಿ ಮತ್ತು ಬದಲಾಗುತ್ತಿರುವ ನಿರೀಕ್ಷೆಗಳಿಗೆ ಅನುಗುಣವಾಗಿ ಹೊಸ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಆಕಾಶವಾಣಿಯನ್ನು ಮತ್ತಷ್ಟು ಜನಸ್ನೇಹಿ ಮಾಧ್ಯಮವನ್ನಾಗಿಸುವುದು ತಮ್ಮ ಗುರಿಯಾಗಿದೆ ಎಂದು ನಂದನ್ ಕುಮಾರ್ ತಿಳಿಸಿದ್ದಾರೆ.

ನಂದನ್ ಕುಮಾರ್ ಎಲ್.ಓ. ಅವರು ನೂತನ ಕಾರ್ಯಕ್ರಮ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿರುವುದಕ್ಕೆ ಆಕಾಶವಾಣಿ ಸಿಬ್ಬಂದಿ, ಕಲಾವಿದರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಶುಭ ಹಾರೈಸಿದ್ದಾರೆ..

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650