ಹೊಸನಗರ ; ನೂತನ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪಗೌಡ ಇಂದು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತಾಲೂಕಿನ ಇತಿಹಾಸ ಪ್ರಸಿದ್ಧ ಕಾರಣಗಿರಿಯ ಶ್ರೀ ಸಿದ್ದಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ದೇಲವ ದರ್ಶನ ಪಡೆದರು. ವ್ಯವಸ್ಥಾಪನ ಸಮಿತಿಯು ಶಾಲು ಹೊದಿಸಿ ಗೌರವಿಸಿತು.
ನಿಕಟಪೂರ್ವ ಸಿಪಿಐ ಗುರಣ್ಣ ಎಸ್ ಹೆಬ್ಬಾಳ್ ಅವರು ಬೆಂಗಳೂರು ಲೋಕಾಯುಕ್ತಕ್ಕೆ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ನೂತನ ಸಿಪಿಐ ಆಗಿ ಗೌಡಪ್ಪಗೌಡ ಸೋಮವಾರ ಅಧಿಕಾರ ವಹಿಸಿಕೊಂಡಿದ್ದರು.

