ಹೊಸನಗರ

ರಿಪ್ಪನ್‌ಪೇಟೆ ಕಸ್ತೂರಿ ಕನ್ನಡ ಸಂಘಕ್ಕೆ ನೂತನ ಸಾರಥಿಗಳು: ಅಧ್ಯಕ್ಷರಾಗಿ ಕೆರೆಹಳ್ಳಿ ದೇವರಾಜ್, ಪ್ರಧಾನ ಕಾರ್ಯದರ್ಶಿಯಾಗಿ ನಿರಂಜನ್ ಎಂ. ಆಯ್ಕೆ

ಕಸ್ತೂರಿ ಕನ್ನಡ ಸಂಘದ 6ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದ ನೂತನ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನೆರವೇರಿದೆ.

Kerehalli Devaraj, Niranjan M

ರಿಪ್ಪನ್‌ಪೇಟೆ: ಇಲ್ಲಿನ ಕಸ್ತೂರಿ ಕನ್ನಡ ಸಂಘದ 6ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದ ನೂತನ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನೆರವೇರಿದೆ. ಸಂಘದ ನೂತನ ಅಧ್ಯಕ್ಷರಾಗಿ ಕೆರೆಹಳ್ಳಿ ದೇವರಾಜ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಿರಂಜನ್ ಎಂ. ಅವರು ಆಯ್ಕೆಯಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಪಟ್ಟಣದ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಜಿ.ಆರ್. ಗೋಪಾಲಕೃಷ್ಣ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು.

ನೂತನ ಪದಾಧಿಕಾರಿಗಳ ವಿವರ:

  • ಗೌರವಾಧ್ಯಕ್ಷರು: ಜಿ.ಆರ್. ಗೋಪಾಲಕೃಷ್ಣ
  • ಅಧ್ಯಕ್ಷರು: ಕೆರೆಹಳ್ಳಿ ದೇವರಾಜ್
  • ಪ್ರಧಾನ ಕಾರ್ಯದರ್ಶಿ: ನಿರಂಜನ್ ಎಂ.
  • ಖಜಾಂಚಿ: ಪಿಯೂಸ್ ರೊಡ್ರಿಗಸ್
  • ಉಪಾಧ್ಯಕ್ಷರು: ಹಬೀಬ್, ನೇಮಪ್ಪ ಬಂಡಿ, ದೀಪಾ ನಾಗರಾಜ್, ಸಾಜೀದಾ, ಆರ್.ಡಿ. ಶೀಲಾ, ಈಶ್ವರಪ್ಪಗೌಡ ಕುಕ್ಕಲಲೆ ಹಾಗೂ ಹೇಮಾ ಮಂಜಪ್ಪ
  • ಸಂಘಟನಾ ಕಾರ್ಯದರ್ಶಿಗಳು: ಅಬ್ದುಲ್ ಬ್ಯಾರಿ, ನಿರ್ಮಲಾ, ಪ್ರವೀಣ್ ಆಚಾರ್ ಹಾಗೂ ಸುದೇಶ ಆರ್.ಡಿ.

ಈ ಎಲ್ಲಾ ನೂತನ ಪದಾಧಿಕಾರಿಗಳನ್ನು ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ನೂತನ ಅಧ್ಯಕ್ಷ ಕೆರೆಹಳ್ಳಿ ದೇವರಾಜ್ ಪತ್ರಿಕಾ ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

error: Content is protected !!