ಹೊಸನಗರ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕು ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮಗಳ ಸ್ಥಿರಾಸ್ತಿಗಳ 2026-27ನೇ ಸಾಲಿನ ಪರಿಷ್ಕೃತ ಅಂದಾಜು ಮಾರ್ಗಸೂಚಿ ಮಾರುಕಟ್ಟೆ ಮೌಲ್ಯಗಳ ಪಟ್ಟಿಯನ್ನು ಹೊಸನಗರದ ಉಪನೋಂದಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಈ ಕುರಿತು ಸಾರ್ವಜನಿಕರಿಂದ ಅಹವಾಲು, ಆಕ್ಷೇಪಣೆ, ಸಲಹೆ ಹಾಗೂ ಸೂಚನೆಗಳನ್ನು ಆಹ್ವಾನಿಸಲಾಗಿದೆ. ಆಕ್ಷೇಪಣೆ ಅಥವಾ ಸಲಹೆಗಳಿದ್ದಲ್ಲಿ ದಿನಾಂಕ 03-12-2026ರ ಒಳಗಾಗಿ ಹಿರಿಯ ಉಪನೋಂದಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಹೊಸನಗರ ಉಪನೋಂದಣಾಧಿಕಾರಿ ಬಿ.ಹೆಚ್. ಶಿವಾನಂದಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

