Ripponpete

ನವಜಾತ ಹೆಣ್ಣು ಶಿಶುವನ್ನು ಗವಟೂರು ಬಸ್ ನಿಲ್ದಾಣದಲ್ಲಿ ಅನಾಥವಾಗಿ ಬಿಟ್ಟುಹೋದ ಹೆತ್ತವರು !

ರಿಪ್ಪನ್‌ಪೇಟೆ : ಸಮೀಪದ ಗವಟೂರು ಹೊಳೆ ಬಳಿ ಬಸ್ ನಿಲ್ದಾಣದಲ್ಲಿ ನವಜಾತ ಹೆಣ್ಣು ಶಿಶುವನ್ನು ಅನಾಥ ಸ್ಥಿತಿಯಲ್ಲಿ ಬಿಟ್ಟು ಹೋಗುವ ಘಟನೆ ನಡೆದಿದೆ. ಈ ಮಗು ಸುಮಾರು 10-15 ದಿನಗಳ ಪ್ರಾಯದಿದ್ದು, ಬಟ್ಟೆಯಲ್ಲಿ ಸುತ್ತಿದ ಕೈ ಚೀಲದಲ್ಲಿದ್ದು, ಹಾಲಿನ ಬಾಟಲ್ ಕೂಡ ಜೊತೆಯಲ್ಲಿ ಇಟ್ಟು ಹೋಗಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ರಾತ್ರಿ 9 ಗಂಟೆಯ ಸಮಯದಲ್ಲಿ ಬಸ್ ನಿಲ್ದಾಣದ ಹಿಂಭಾಗದ ನಿವಾಸಿಯೊಬ್ಬರು ಮಗು ಅಳುವಿನ ಶಬ್ದ ಕೇಳಿ ಪರಿಶೀಲನೆ ನಡೆಸಿದಾಗ ಈ ಘಟನೆಯು ಬೆಳಕಿಗೆ ಬಂದಿದೆ. ತಕ್ಷಣ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಯಿತು.

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. 1.6 ಕೆ.ಜಿ ತೂಕದ ಮಗು ಸದ್ಯ ಆರೋಗ್ಯವಾಗಿದ್ದು, ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಆರೈಕೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಮತ್ತು ಪೋಷಣೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮಗುವನ್ನು ಯಾರು ಹಾಗೂ ಯಾವ ಕಾರಣದಿಂದ ಬಿಟ್ಟು ಹೋಗಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>