SHIVAMOGGA ; ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸೆ. 27 ರಂದು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಹೊಸನಗರ ಪಟ್ಟಣದ ಅಂಚೆ ಕಚೇರಿ ರಸ್ತೆಯಲ್ಲಿರುವ ಶ್ರೀ ಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಹಾಗೂ ದಾವಣಗೆರೆ ತಾಲೂಕು ದೊಡ್ಡಬಾತಿ ಕೆ.ಎಂ.ಎಫ್. ಡೈರಿ ಇಲ್ಲಿ ಕಾರ್ಯಕ್ರಮ ನಡೆಯಲಿದೆ.
ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.