HOSANAGARA ; ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಳೂರು ಕ್ಷೇತ್ರದ ಸದಸ್ಯೆಯಾಗಿ ನಿರ್ಮಲ ರಾಘವೇಂದ್ರ ಚೀಟಿ ಎತ್ತುವ ಮೂಲಕ ನೂತನ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ.
ನಾಲ್ಕು ವರ್ಷಗಳ ಹಿಂದೆ ನಡೆದ ಚುನಾವಣೆಯಲ್ಲಿ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ಸದಸ್ಯೆಯಾಗಿ ಕಳೂರು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ರಶ್ಮಿ ಗೆಲುವು ಸಾಧಿಸಿದ್ದು ಅವರು ಆಶಾ ಕಾರ್ಯಕರ್ತೆಯಾಗಿ ಕೆಲಸ ನಿರ್ವಹಿಸುತ್ತಿರುವ ಕಾರಣ ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ನ. 23ರಂದು ಚುನಾವಣೆ ನಡೆಯಬೇಕಾಗಿದ್ದು ಆದರೆ ನಾಮಪತ್ರ ಹಿಂಪಡೆಯುವ ದಿನವಾದ ಇಂದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶಶಿಕಲಾ ರಾಮು ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾದ ನಿರ್ಮಲ ರಾಘವೇಂದ್ರ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರ ಹೊಂದಾಣಿಕೆಯಿಂದ ಇನ್ನೂ 10 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಬರಲಿದೆ. 10 ತಿಂಗಳಿಗಾಗಿ ಚುನಾವಣೆ ನಡೆಸುವುದು ಬೇಡ ಎಂದು ತೀರ್ಮಾನಿಸಿ ಇಬ್ಬರು ಅಭ್ಯರ್ಥಿಗಳು ಹೊಂದಾಣಿಕೆ ಮಾಡಿಕೊಂಡು ಚೀಟಿ ಎತ್ತುವ ಮೂಲಕ ಬಿಜೆಪಿ ಅಭ್ಯರ್ಥಿ ನಿರ್ಮಲ ರಾಘವೇಂದ್ರ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ್‌ಕುಮಾರ್ ಹಾಗೂ ಕಾಂಗ್ರೆಸ್ ಹಾಗೂ ಬಿಜೆಪಿಯ ಬೆಂಬಲಿತ ಗ್ರಾಮ ಪಂಚಾಯತಿಯ ಎಲ್ಲ ಸದಸ್ಯರು ಉಪಸ್ಥಿತರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.