Bangalore | ಚಂದನವನದ ಕ್ಯೂಟ್ ಕಪಲ್‌ಗಳಲ್ಲೊಂದಾದ ಸಂಗೀತ ನಿರ್ದೇಶಕ, ಗಾಯಕ ಚಂದನ್ ಶೆಟ್ಟಿ (Chandan Shetty) ಮತ್ತು ನಟಿ ನಿವೇದಿತಾ ಗೌಡ (Niveditha Gowda) ಡಿವೋರ್ಸ್ (Divorce) ಪಡೆದಿದ್ದಾರೆ.
ವಿವಾಹ ವಿಚ್ಚೇಧನ ನೀಡುವಂತೆ ಬೆಂಗಳೂರಿನ ಶಾಂತಿನಗರದ 2ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ವಿಚ್ಚೇದನ ಮಂಜೂರು ಮಾಡಿದೆ.
ಬಿಗ್ ಬಾಸ್ ಮನೆಯಲ್ಲಿ ಪರಿಚಯವಾಗಿದ್ದ ಈ ಜೋಡಿ ಮೈಸೂರು ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್ ಅವರು ನಿವೇದಿತಾಗೆ ಪ್ರಪೋಸ್ ಮಾಡಿದ್ದರು. ಇದು ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು.
2020ರ ಫೆಬ್ರವರಿ 26ರಂದು ಅದ್ಧೂರಿಯಾಗಿ ಮದುವೆಯಾಗಿದ್ದರು. ಈ ಇಬ್ಬರೂ ಅನ್ಯೋನ್ಯ ಜೀವನ ನಡೆಸುತ್ತಿದ್ದರು ಎನ್ನುವುದಕ್ಕೆ ಅವರೇ ಮಾಡಿಕೊಂಡಿದ್ದ ಹಲವಾರು ರೀಲ್ಸ್ ಸಾಕ್ಷಿಯಾಗಿದ್ದವು. ಆದರೆ, ಏಕಾಏಕಿ ಇಬ್ಬರೂ ನಿನ್ನೆಯಷ್ಟೇ ಡಿವೋರ್ಸ್‌ಗಾಗಿ ಅರ್ಜಿ ಸಲ್ಲಿಸಿದ್ದು 4 ವರ್ಷದ ವೈವಾಹಿಕ ಜೀವನಕ್ಕೆ ಇತಿಶ್ರೀ ಹಾಡಿದ್ದಾರೆ.
ಡಿವೋರ್ಸ್ ಕಾರಣ ತಿಳಿದುಕೊಂಡಿಲ್ಲ. ಆದರೆ, ಇಂದು ಇಬ್ಬರೂ ಬೆಂಗಳೂರಿನ ಫ್ಯಾಮಿಲಿ ಕೋರ್ಟ್‌ಗೆ ಹಾಜರಾಗಿದ್ದರು. ಇಬ್ಬರೂ ಒಪ್ಪಿಗೆಯ ಮೇರೆಗೆ ಅರ್ಜಿ ಸಲ್ಲಿಸಿದ್ದರು.

ದಾಂಪತ್ಯಕ್ಕೆ ಬ್ರೇಕ್ ಬಿದ್ದ ಬಳಿಕ ಮಾಧ್ಯಮಗಳ ಕಣ್ಣು ತಪ್ಪಿಸಲು ಕೋರ್ಟ್‌ನ ಹಿಂದಿನ ಗೇಟ್‌ನಿಂದ ಇಬ್ಬರೂ ಕೈಕೈ ಹಿಡಿದು ಹೊರಬಂದಿದ್ದಾರೆ.
ವಿಚ್ಚೇದನ ಬಳಿಕ ಸಾಮಾನ್ಯವಾಗಿ ಜೋಡಿಗಳು ಜಗಳ ಆಡ್ತಾರೆ, ಮುಖ ಸಿಂಡರಿಸಿಕೊಂಡು ಹೋಗುತ್ತಾರೆ. ಆದರೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಫ್ರೆಂಡ್ಲಿಯಾಗಿಯೇ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ.
ನ್ಯಾಯಾಲಕ್ಕೆ ಹಾಜರಾದ ಈ ಜೋಡಿ ಅಕ್ಕ-ಪಕ್ಕ ಕುಳಿತು ವಿಚಾರಣೆ ಎದುರಿಸಿದ್ದಾರೆ. ವಿಚ್ಚೇದನ ಮಂಜೂರಿನ ಬಳಿಕ ಕೈಕೈ ಹಿಡಿದುಕೊಂಡು ತೆರಳಿದ ವಿಡಿಯೋಗಳು ಭಾರಿ ವೈರಲ್ ಆಗಿದ್ದು ಇದು ಅನೇಕರಿಗೆ ಅಚ್ಚರಿ ಸಹ ಮೂಡಿಸಿದೆ.
Read More
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಸೈದ್ಧಾಂತಿಕ ಗೆಲುವಲ್ಲ ; ಮಾಜಿ ಸಚಿವ ಕಿಮ್ಮನೆ ರತ್ನಾಕರ್

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.