ಎನ್ಎಸ್ಎಪಿ ಫಲಾನುಭವಿಗಳು ತಕ್ಷಣ ಈ ಕೆಲಸ ಮಾಡಿ

Written by Mahesh Hindlemane

Published on:

ಹೊಸನಗರ ; ತಾಲ್ಲೂಕಿನಲ್ಲಿರುವ ಇಂದಿರಾ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಹಾಗೂ ವಿಧವಾ ವೇತನ ಪಡೆಯುತ್ತಿರುವ ಫಲಾನುಭವಿಗಳು ಜೀವಂತ ಇರುವ ಬಗ್ಗೆ ಸರ್ಕಾರಕ್ಕೆ ಮನದಟ್ಟು ಮಾಡುವ ಉದ್ದೇಶದಿಂದ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು ಫಲಾನುಭವಿಗಳು ತಕ್ಷಣ ತಮಗೆ ಸಂಬಂಧಪಟ್ಟ ಗ್ರಾಮ ಲೆಕ್ಕಾಧಿಕಾರಿಗಳನ್ನು ಭೇಟಿ ಮಾಡಬೇಕೆಂದು ಹೊಸನಗರ ತಹಸೀಲ್ದಾರ್ ಆದೇಶದ ಮೇರೆಗೆ ಗ್ರೇಡ್ 2 ತಹಸೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರೀಟ್ಟೋ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಅವರು ತಾಲ್ಲೂಕು ಕಛೇರಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಹೊಸನಗರ ತಾಲ್ಲೂಕಿನಲ್ಲಿ ಪಟ್ಟಣದಲ್ಲಿ 42 ಹಾಗೂ ಗ್ರಾಮೀಣ ಪ್ರದೇಶದಲ್ಲಿ 2999 ಒಟ್ಟು 3041 ಫಲಾನುಭವಿಗಳಿದ್ದು ಇವರೆಲ್ಲರೂ ಸರ್ಕಾರದ ಸೌಲಭ್ಯ ಪಡೆಯುತ್ತಿದ್ದಾರೆ. ಇವರುಗಳು ತಮ್ಮ ವ್ಯಾಪ್ತಿಗೆ ಬರುವ ಗ್ರಾಮ ಲೆಕ್ಕಾಧಿಕಾರಿಗಳನ್ನು ತಕ್ಷಣ ತಮ್ಮ ಆಧಾರ್ ಕಾರ್ಡ್‌ನೊಂದಿಗೆ ಭೇಟಿ ಮಾಡಿ ಮೊಬೈಲ್ ಆಪ್ ಮೂಲಕ ತಮ್ಮ ಭಾವಚಿತ್ರವನ್ನು ತೆಗೆಸಿಕೊಳ್ಳಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ನಿಮಗೆ ಸರ್ಕಾರದಿಂದ ಬರುವ ಸೌಲಭ್ಯ ಕಡಿತವಾಗಬಹುದು ಎಂದು ತಿಳಿಸಿದ್ದು ಗ್ರಾಮ ಲೆಕ್ಕಾಧಿಕಾರಿಗಳು ಈಗಾಗಲೇ ಕೆಲಸ ಆರಂಭಿಸಿದ್ದಾರೆ ಫಲಾನುಭವಿಗಳು ತಕ್ಷಣ ಗ್ರಾಮ ಆಡಳಿತಾಧಿಕಾರಿಗಳನ್ನು ಭೇಟಿ ಮಾಡಬೇಕೆಂದು ತಿಳಿಸಿದ್ದಾರೆ

Leave a Comment