ವಿದ್ಯಾರ್ಥಿಗಳ ಸೇವಾ ಮನೋಭಾವನೆಗೆ ಎನ್.ಎಸ್.ಎಸ್. ಸಹಕಾರಿ ; ಬೇಳೂರು ಗೋಪಾಲಕೃಷ್ಣ

Written by malnadtimes.com

Published on:

ರಿಪ್ಪನ್‌ಪೇಟೆ ; ವಿದ್ಯಾರ್ಥಿ ದೆಸೆಯಲ್ಲಿ ನಾಯಕತ್ವ ಗುಣ ಮತ್ತು ಸೇವಾ ಮನೋಭಾವನೆಯನ್ನು ಕಲಿಯಲು ಎನ್.ಎಸ್.ಎಸ್.ಯೋಜನಾ ಶಿಬಿರಗಳು ಸಹಕಾರಿಯಾಗಲಿದೆ. ಸೇವಾ ಯೋಜನೆ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಶಿಸ್ತಿನ ಜೊತೆಗೆ ಜೀವನದ ಅನುಭವವನ್ನು ಪಡೆಯಬಹುದಾಗಿದೆ ಎಂದು ಕರ್ನಾಟಕ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ, ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

WhatsApp Group Join Now
Telegram Group Join Now
Instagram Group Join Now

ಚಂದವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ರಾಷ್ಟ್ರೀಯ ಸೇವಾ ಯೋಜನೆ ಘಟಕದವರು ಆಯೋಜಿಸಲಾಗಿರುವ 7 ದಿನಗಳ ವಿಶೇಷ ಎನ್.ಎಸ್.ಎಸ್. ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ವಿದ್ಯಾರ್ಥಿಗಳಲ್ಲಿ ಮೇಲು-ಕೀಳು ಎಂಬ ಭಾವನೆಯನ್ನು ದೂರ ಮಾಡಿ ಗ್ರಾಮೀಣ ಭಾಗದ ಸಮಸ್ಯೆಗಳನ್ನು ಅರಿತುಕೊಂಡು ಗ್ರಾಮೀಣ ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಸಹಕಾರಿಯಾಗುವುದೆಂದ ಅವರು, ವಿದ್ಯಾರ್ಥಿಗಳು ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳುವುದರಿಂದ ಬೌದ್ಧಿಕ ವಿಕಾಸಕ್ಕೆ ಕಾರಣವಾಗುವುದು ಎಂದರು.

ಕಾಲೇಜ್ ಪ್ರಾಚಾರ್ಯ ಪ್ರೋ. ಹೆಚ್.ಎಸ್. ವಿರೂಪಾಕ್ಷಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಏಳು ದಿನಗಳ ಎನ್.ಎಸ್.ಎಸ್. ಶಿಬಿರದಲ್ಲಿ ಭಾಗವಹಿಸಿರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಹಳ್ಳಿ ಜೀವನದ ಅನುಭವವಾಗುವುರ ಜತೆಗೆ ಅವರ ಸಂಕಷ್ಟವೂ ಅರ್ಥವಾಗಲಿದೆ.ಈ ಸನುಭವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅರ್ಥ ಪೂರ್ಣ ಜೀವನ ಸಾಧ್ಯವೆಂದರು.

ಕಾಲೇಜ್ ಅಭಿವೃದ್ದಿ ಸಮಿತಿಯ ಉಪಾಧ್ಯಕ್ಷ ಹಾಲಸ್ವಾಮಿಗೌಡ ಬೆಳಕೋಡು, ಕೆಂಚನಾಲ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಬೇದುಲ್ಲಾ ಷರೀಫ್, ಉಪಾಧ್ಯಕ್ಷೆ ಹೂವಮ್ಮ, ಗ್ರಾಮ ಪಂಚಾಯ್ತಿ ಸದಸ್ಯರಾದ ಕೆ.ವಿ ರಮ್ಯ ಶಿವಕುಮಾರ, ಕೃಷ್ಣೋಜಿರಾವ್, ದಿವಾಕರ, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ, ಚಂದವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯೋಪಾಧ್ಯಾಯ ಜಗದೀಶ ಕಾಗಿನಲ್ಲಿ, ಸಿಡಿಸಿ ಪದಾಧಿಕಾರಿಗಳು ಹಾಗೂ ಕಾಲೇಜ್ ಪ್ರಾಧ್ಯಾಪಕ ವೃಂದ ಹಾಜರಿದ್ದರು.

Leave a Comment