Chikmagaluru News

ಸೇತುವೆ ಮೇಲಿಂದ ಹೊಳೆಗೆ ಹಾರಿ ನಾರಾಯಣ ಹೃದಯಾಲಯದ ನರ್ಸ್ ಆತ್ಮಹತ್ಯೆ !

ನ.ರಾ.ಪುರ : ಸೇತುವೆ ಮೇಲಿಂದ ಹೊಳೆಗೆ ಹಾರಿ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲೆ ಎನ್.ಆರ್.ಪುರ ತಾಲೂಕಿನ ಮುಡುಬ ಸಮೀಪ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತರನ್ನು ಎನ್.ಆ‌ರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದ ನಿವಾಸಿ ರನ್ಯಾ ಬೇಸಿಲ್ (30) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗದ ಪ್ರತಿಷ್ಠಿತ ‘ನಾರಾಯಣ ಹೃದಯಾಲಯ’ ಆಸ್ಪತ್ರೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ರನ್ಯಾ ಅವರು ಸೋಮವಾರ ಸಂಜೆ ಶಿವಮೊಗ್ಗದಲ್ಲಿ ತಮ್ಮ ಕೆಲಸ ಮುಗಿಸಿ ಮುತ್ತಿನಕೊಪ್ಪದ ಮನೆಗೆ ಮರಳಿದ್ದರು. ಮನೆಗೆ ಬಂದ ಕೆಲವೇ ಹೊತ್ತಿನಲ್ಲಿ ಮತ್ತೆ ಹೊರಗೆ ಹೋದವರು, ಮುಡುಬ ಸಮೀಪದ ಸೇತುವೆಯ ಮೇಲಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ರನ್ಯಾ ಅವರ ಆತ್ಮಹತ್ಯೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಕುಟುಂಬಸ್ಥರಲ್ಲಿ ಈ ಘಟನೆ ತೀವ್ರ ಆಘಾತ ಮೂಡಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ರಕ್ಷಣಾ ತಂಡದವರು ಮೃತದೇಹವನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಘಟನೆ ಸಂಬಂಧ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸ್ನೇಹಿತನ ಮದುವೆಗೆ ಬಂದವ ನೀರುಪಾಲು !

ನ.ರಾ.ಪುರ : ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬನ್ನೂರು ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ಗದಗ ಮೂಲದ, ಬೆಂಗಳೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ (27) ಎಂದು ಗುರುತಿಸಲಾಗಿದೆ.

ಅಭಿಷೇಕ್ ಅವರು ತಮ್ಮ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಸ್ನೇಹಿತರ ಜತೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮಕ್ಕೆ ಬಂದಿದ್ದರು. ಸ್ನೇಹಿತರೊಂದಿಗೆ ಸ್ಥಳೀಯ ಹೋಂ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದರು. ಸೋಮವಾರ ಬೆಳಗ್ಗೆ ಭದ್ರಾ ನದಿಗೆ ಈಜಲು ತೆರಳಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಅಭಿಷೇಕ್ ನಾಪತ್ತೆಯಾಗಿದ್ದರು.

ಯುವಕ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕದಳದ ಸಿಬ್ಬಂದಿ ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದರು. ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ನಂತರ, ಬನ್ನೂರು ಗ್ರಾಮದ ಸಮೀಪದ ನದಿಯಲ್ಲಿ ಅಭಿಷೇಕ್ ಮೃತದೇಹ ಪತ್ತೆಯಾಗಿದೆ.

ಮದುವೆ ಸಂಭ್ರಮದಲ್ಲಿದ್ದ ಸ್ನೇಹಿತರು ಶೋಕಸಾಗರದಲ್ಲಿ ಮುಳುಗಿದ್ದು, ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>