ರಕ್ಷಾ ಹೋಮಕ್ಕೆ ಮೂಲೆಗದ್ದೆ ಶ್ರೀಗಳಿಂದ ಪೂರ್ಣಾಹುತಿ ಅರ್ಪಣೆ

Written by Mahesha Hindlemane

Published on:

ಹೊಸನಗರ : ಪಟ್ಟಣದ ಚೌಡಮ್ಮ ರಸ್ತೆಯಲ್ಲಿ ನಿರ್ಮಾಣವಾಗಿರುವ ಕಳೂರು ಶ್ರೀ ರಾಮೇಶ್ವರ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ಲೋಕಾರ್ಪಣೆಗೂ ಮುನ್ನ ಗುರುವಾರ ಹಮ್ಮಿಕೊಂಡಿದ್ದ ವಿವಿಧ ಪೂಜಾ ಕೈಂಕರ್ಯದಲ್ಲಿ ತಾಲೂಕಿನ ಮೂಲೆಗದ್ದೆ ಮಠದ ಶಿವಯೋಗಾಶ್ರಮದ ಪೀಠಾಧ್ಯಕ್ಷ ಶ್ರೀ ಶ್ರೀ ಚನ್ನಬಸವ ಮಹಾಸ್ವಾಮಿಗಳು ರಕ್ಷಾ ಹೋಮಕ್ಕೆ ಪೂರ್ಣಾಹುತಿ ಸಮರ್ಪಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ವೇಳ ಸಂಘದ ಅಧ್ಯಕ್ಷ ದುಮ್ಮ ವಿನಯ್ ಕುಮಾರ್, ಜಿಲ್ಲಾ ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಹಾಗು ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಆರ್.ಎಂ. ಮಂಜುನಾಥಗೌಡ, ಶಿಮುಲ್ ಅಧ್ಯಕ್ಷ ಗುರುಶಕ್ತಿ ವಿದ್ಯಾಧರ ಸೇರಿದಂತೆ ಸಂಘದ ಹಲವು ನಿರ್ದೇಶಕರು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Comment