ಜ.19 ರಂದು ಹೊಸನಗರ ತಾಲ್ಲೂಕು ವರ್ತಕರ ಸಂಘದ ವತಿಯಿಂದ ಗಣಹವನ ಹಾಗೂ ಸಾಧಕರಿಗೆ ಸನ್ಮಾನ

Written by Mahesha Hindlemane

Published on:

ಹೊಸನಗರ ; ತಾಲ್ಲೂಕು ವರ್ತಕರ ಸಂಘದ ವತಿಯಿಂದ ಜನವರಿ 19ರ ಭಾನುವಾರ ಬೆಳಗ್ಗೆ ಗಣಪತಿ ದೇವಸ್ಥಾನದ ಆವರಣದಲ್ಲಿ ಗಣಹವನ ಹಾಗೂ ಸಭಾ ಕಾರ್ಯಕ್ರಮ ನಡೆಯಲಿದ್ದು ಹೊಸನಗರದಲ್ಲಿ ಕಷ್ಟಪಟ್ಟು ದುಡಿಯುತ್ತಿರುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ವರ್ತಕರ ಸಂಘದ ಅಧ್ಯಕ್ಷ ವಿಜೇಂದ್ರ ಶೇಟ್‌ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಗಣಹವನ ಕಾರ್ಯಕ್ರಮವು ಬೆಳಗ್ಗೆ 8;30ರಿಂದ 10ಗಂಟೆಯವರೆಗೆ ನಡೆಯಲಿದ್ದು ನಂತರ ಹೊಸನಗರ ತಾಲ್ಲೂಕು ಮೂಲೆಗದ್ದೆ ಅಭಿನವ ಚನ್ನಬಸವ ಸ್ವಾಮೀಜಿಯವರ ಆಶೀರ್ವಚನ ಹಾಗೂ ಇವರ ನೇತೃತ್ವದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು.

ಈ ಹಿಂದೆ ಇಲ್ಲಿನ ಗಾಯತ್ರಿ ಮಂದಿರದಲ್ಲಿ ವರ್ತಕರಿಗಾಗಿ ನಡೆಸಿದ ಒಳಾಂಗಣ ಕ್ರೀಡಾಕೂಟದಲ್ಲಿ ವಿಜೇತರದವರಿಗೆ ಬಹುಮಾನ ವಿತರಣೆ ಹಾಗೂ ಹಗಲಿರುಳು ದುಡಿಯುತ್ತಿರುವ ಶ್ರಮಿಕರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ನಂತರ ಮಧ್ಯಾಹ್ನ 1ಗಂಟೆಗೆ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಸಲಾಗಿದೆ. ಈ ಎಲ್ಲ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವರ್ತಕರ ಸಂಘದ ಅಧ್ಯಕ್ಷರಾದ ವಿಜೇಂದ್ರ ಶೇಟ್‌ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮಗಳು ನಡೆಯಲಿದ್ದು ಹೊಸನಗರ ತಾಲ್ಲೂಕಿನ ಎಲ್ಲಾ ವರ್ತಕರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಕೇಳಿಕೊಂಡಿದ್ದಾರೆ‌.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಸುದೇಶ್ ಕಾಮತ್, ಪ್ರಧಾನ ಕಾರ್ಯದರ್ಶಿ ಹರೀಶ್, ಸಹಕಾರ್ಯದರ್ಶಿ ವಾಧಿರಾಜ್, ಖಜಾಂಚಿ ದೀಪಕ್ ಮತ್ತು ಮಂಧಾರ ವಿಠಲ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave a Comment