Shivamogga

ಶಾಲಾ ಬಸ್ ಹರಿದು ಒಂದೂವರೆ ವರ್ಷದ ಮಗು ಸಾವು !

ಶಿವಮೊಗ್ಗ ; ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗುವೊಂದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಗೋಪಾಲಗೌಡ ಬಡಾವಣೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತ ಮಗುವನ್ನು ಗೋಪಾಲಗೌಡ ಬಡಾವಣೆಯ ನಿವಾಸಿ ಮಂಜುನಾಥ್ ಎನ್ನುವವರ ಪುತ್ರ ಒಂದೂವರೆ ವರ್ಷದ ಆರ್ಯನ್ ಎಂದು ಗುರುತಿಸಲಾಗಿದೆ. 

ಹೇಗಾಯ್ತು ಘಟನೆ ?

ಮಂಜುನಾಥ್ ಅವರ ಇನ್ನೊಬ್ಬ ಮಗ ಆರುಷ್ ಎನ್ನುವವನು ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದು ಇಂದು ಮಧ್ಯಾಹ್ನ ಆರುಷ್ ಶಾಲಾ ಬಸ್‌ನಲ್ಲಿ ಮನೆಗೆ ವಾಪಸ್ ಬಂದಿದ್ದಾನೆ. ಆರುಷ್’ನನ್ನು ಮನೆಗೆ ಕರೆತರಲು ಮನೆ ಕೆಲಸದ ಮಹಿಳೆ ಬಸ್‌ನಿಂದ ಇಳಿಸಿಕೊಳ್ಳಲು ಹೋಗಿದ್ದರು. ಈ ವೇಳೆ ಆಕೆಯ ಹಿಂದೆಯೇ ಆರ್ಯನ್ ಹೋಗಿದ್ದು ಕೆಲಸದ ಮಹಿಳೆ ಆರುಷ್’ನನ್ನು ಬಸ್‌ನಿಂದ ಇಳಿಸಿಕೊಳ್ಳುವ ವೇಳೆ ಆರ್ಯನ್ ಬಸ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದನು ಎನ್ನಲಾಗಿದೆ. ಆದರೆ, ಇದನ್ನು ಗಮನಿಸದ ಬಸ್ ಚಾಲಕ ಬಸ್‌ಅನ್ನು ಚಾಲನೆ ಮಾಡಿದ ಪರಿಣಾಮ ಮಗುವಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಘಟನೆಯಿಂದ ಮಗುವಿನ ತಲೆ ಹಾಗೂ ಮುಖಕ್ಕೆ ತೀವ್ರ ಪೆಟ್ಟಾಗಿದ್ದು, ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಆಸ್ಪತ್ರೆ ತಲುಪುವ ವೇಳೆಗಾಗಲೇ ಮಗು ಉಸಿರು ಚೆಲ್ಲಿತ್ತು ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>