N.R.PURA ; ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗುವೊಂದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ರಾವೂರು ಗ್ರಾಮದಲ್ಲಿ ನಡೆದಿದೆ.
ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ. ಆನಂದ್ ಹಾಗೂ ಅನು ದಂಪತಿಯ ಪುತ್ರಿ ಪೂರ್ವಿಕಾ ಮೃತಪಟ್ಟ ಮಗು ಎನ್ನಲಾಗಿದೆ. ಡಿಸೆಂಬರ್ 19 ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮನೆಯಲ್ಲಿ ಆಟವಾಡುತ್ತ ಮಗು ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಮೃತಪಟ್ಟಿದೆ ಎನ್ನಲಾಗಿದೆ. ಘಟನೆ ಸಂಬಂಧ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.