RIPPONPETE | ಪಟ್ಟಣದಲ್ಲಿ ಡೆಂಘೀ ರಣಕೇಕೆ ಹಾಕಿದ್ದು ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದುಕೊಂಡಿದೆ.
ಇಲ್ಲಿನ ಹೊಸನಗರ ರಸ್ತೆಯ ನಿವಾಸಿ ಆಶಿಕ್ ರಸೂಲ್ (27) ಚಿಕಿತ್ಸೆ ಫಲಿಸದೆ ಇಂದು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಶನಿವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಆಶಿಕ್ ರಸೂಲ್ ರವರನ್ನು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಮೃತಪಟ್ಟಿದ್ದಾರೆ.
ಹೊಸನಗರ ರಸ್ತೆಯ ರಾಯಲ್ ಕಂಫರ್ಟ್ ಲಾಡ್ಜ್ ಮುಂಭಾಗದಲ್ಲಿ ಬದ್ರಿಯಾ ಮೊಬೈಲ್ ಸೆಂಟರ್ ನಡೆಸುತ್ತಿದ್ದ ಈತ ಜ್ವರದ ಲಕ್ಷಣ ಕಾಣಿಸಿಕೊಂಡು ಕೇವಲ ಮೂರೇ ದಿನಗಳ ಅಂತರದಲ್ಲಿ ಬಿಳಿರಕ್ತ ಕಣಗಳು ತೀವ್ರವಾಗಿ ಕ್ಷೀಣಿಸಿದ ಹಿನ್ನಲೆಯಲ್ಲಿ ಚಿಕಿತ್ಸೆ ಫಲಿಸದೆ ಇಂದು ಸಂಜೆ ಮೃತಪಟ್ಟಿದ್ದಾರೆ.
ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಒಂದೇ ವಾರದ ಅಂತರದಲ್ಲಿ ಡೆಂಘೀ ಜ್ವರ ಇಬ್ಬರನ್ನು ಬಲಿ ಪಡೆದುಕೊಂಡಿದೆ. ಜು.09 ರಂದು ರಶ್ಮಿ ನಾಯಕ್ ಎಂಬುವವರು ಡೆಂಘೀಗೆ ಮೃತಪಟ್ಟಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.