ಫೆಂಗಲ್ ಸೈಕ್ಲೋನ್ ಎಫೆಕ್ಟ್ ; ರಾಜ್ಯದ ಈ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

Written by malnadtimes.com

Published on:

Karnataka Rain | ತಮಿಳುನಾಡಿನ ಕರಾವಳಿ ತೀರದಲ್ಲಿ ಫೆಂಗಲ್ ಚಂಡಮಾರುತ ಉಂಟಾದ ಪರಿಣಾಮ ಕರ್ನಾಟಕದಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

WhatsApp Group Join Now
Telegram Group Join Now
Instagram Group Join Now

ಈ ಸಂಬಂಧ ಹವಾಮಾನ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ಅವರು ಮಾಹಿತಿ ಹಂಚಿಕೊಂಡಿದ್ದು, ಇಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದಂತ ಹಾಸನ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಹಾಗೂ ಕರಾವಳಿ ಜಿಲ್ಲೆಗಳಾದಂತ ಉಡುಪಿ, ದಕ್ಷಿಣ ಕನ್ನಡದಲ್ಲಿಯೂ ಭಾರೀ ಮಳೆಯಾಗಲಿದೆ. ಸಾರ್ವಜನಿಕರು ಎಚ್ಚರಿಕೆಯವಹಿಸುವಂತೆ ತಿಳಿಸಿ, ಯೆಲ್ಲೋ ಅಲರ್ಟ್ ನೀಡಿದ್ದಾರೆ.

ಇಂದು ಕೊಡಗು, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ ಮತ್ತು ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಲಿದೆ.

ಇನ್ನುಳಿದ ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವುದಾಗಿ ತಿಳಿಸಿದ್ದಾರೆ.

Leave a Comment