ಶಿವಮೊಗ್ಗ

ಮಕ್ಕಳ ಕೈಗೆ ಬೈಕ್ ಕೊಡುವ ಮುನ್ನ ಎಚ್ಚರ! ಶಿವಮೊಗ್ಗದಲ್ಲಿ ಮಾಲೀಕನಿಗೆ ಬಿತ್ತು ಭಾರಿ ದಂಡ

An incident has occurred in Shivamogga that serves as a warning to parents and vehicle owners who allow minors to drive vehicles.

InShot 20261019 180845638

ಶಿವಮೊಗ್ಗ: ಅಪ್ರಾಪ್ತರಿಗೆ ವಾಹನ ಚಲಾಯಿಸಲು ನೀಡುವ ಪೋಷಕರು ಹಾಗೂ ವಾಹನ ಮಾಲೀಕರಿಗೆ ಎಚ್ಚರಿಕೆಯ ಸಂದೇಶ ನೀಡುವ ಪ್ರಕರಣವೊಂದು ಶಿವಮೊಗ್ಗದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ನೀಡಿದ್ದ ಮಾಲೀಕನಿಗೆ ನ್ಯಾಯಾಲಯವು ₹26,500 ದಂಡ ವಿಧಿಸಿದೆ.

WhatsApp Group Join Now
Telegram Group Join Now
Instagram Group Join Now

ನಗರದ ಆಲ್ಕೊಳ ಸರ್ಕಲ್ ಬಳಿ ನಡೆದ ವಾಹನ ತಪಾಸಣೆ ವೇಳೆ ಅಪ್ರಾಪ್ತ ಬಾಲಕನೊಬ್ಬ ಸ್ಕೂಟರ್ ಚಲಾಯಿಸುತ್ತಿರುವುದು ಪಶ್ಚಿಮ ಸಂಚಾರ ಠಾಣೆ ಪೊಲೀಸರ ಗಮನಕ್ಕೆ ಬಂದಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ವಾಹನದ ನೋಂದಾಯಿತ ಮಾಲೀಕನಿಗೆ ದಂಡ ವಿಧಿಸಿ ಆದೇಶಿಸಿದೆ.

ಆಲ್ಕೊಳ ಸರ್ಕಲ್ ಬಳಿ ಪೊಲೀಸರ ತಪಾಸಣೆ:

ಅಕ್ಟೋಬರ್ 9ರಂದು ಸಂಜೆ ಸುಮಾರು 5.57ರ ವೇಳೆಗೆ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಸ್ವಪ್ನ ಎಲ್. ಹಾಗೂ ಸಿಬ್ಬಂದಿಗಳಾದ ಸೂರ್ಯನಾಯ್ಕ ಮತ್ತು ಮೊಹಮ್ಮದ್ ಫಾರೂಕ್ ಅವರು ನಗರದ ಆಲ್ಕೊಳ ಸರ್ಕಲ್ ಬಳಿ ಸಂಚಾರ ನಿಯಂತ್ರಣ ಮತ್ತು ವಾಹನ ತಪಾಸಣೆಯಲ್ಲಿ ತೊಡಗಿದ್ದರು.

ಈ ಸಂದರ್ಭದಲ್ಲಿ ವಿನೋಬನಗರ ಪೊಲೀಸ್ ಚೌಕಿ ರಸ್ತೆಯ ಕಡೆಯಿಂದ ಆಲ್ಕೊಳ ಸರ್ಕಲ್ ಕಡೆಗೆ ಬರುತ್ತಿದ್ದ ಟಿವಿಎಸ್ ಜುಪಿಟರ್ ಸ್ಕೂಟರ್‌ (KA14EU6709) ಅನ್ನು ತಡೆದು ಪರಿಶೀಲಿಸಲಾಯಿತು. ಈ ವೇಳೆ ವಾಹನ ಚಲಾಯಿಸುತ್ತಿದ್ದ ಬಾಲಕ ಅಪ್ರಾಪ್ತ ವಯಸ್ಸಿನವನು ಎಂಬುದು ತಿಳಿದುಬಂದಿದೆ.

ಮಾಲೀಕನ ವಿರುದ್ಧ ಪ್ರಕರಣ:

ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ಚಲಾಯಿಸಲು ನೀಡಿದ ಹಿನ್ನೆಲೆಯಲ್ಲಿ, ವಾಹನದ ನೋಂದಾಯಿತ ಮಾಲೀಕನ ವಿರುದ್ಧ ಪೊಲೀಸರು ಮೋಟಾರು ವಾಹನ ಕಾಯ್ದೆಯ ಕಲಂ 199(ಎ), 146, 196, 190(2) ಹಾಗೂ ಕೇಂದ್ರ ಮೋಟಾರು ವಾಹನ ನಿಯಮ 115ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಪ್ರಕರಣಕ್ಕೆ ಸಂಬಂಧಿಸಿದ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.

ನ್ಯಾಯಾಲಯದಿಂದ ₹26,500 ದಂಡ:

ಪ್ರಕರಣದ ವಿಚಾರಣೆ ನಡೆಸಿದ ಶಿವಮೊಗ್ಗದ 4ನೇ ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ವಾಹನ ಮಾಲೀಕನಿಗೆ ₹26,500 ದಂಡ ವಿಧಿಸಿ ಆದೇಶ ಹೊರಡಿಸಿದೆ.

ಪೋಷಕರೇ, ಮಕ್ಕಳ ಸುರಕ್ಷತೆ ನಿಮ್ಮ ಹೊಣೆ!:

ಅಪ್ರಾಪ್ತ ವಯಸ್ಸಿನಲ್ಲಿ ವಾಹನ ಚಲಾಯಿಸುವುದರಿಂದ ಮಕ್ಕಳ ಜೀವಕ್ಕೆ ಅಪಾಯ ಉಂಟಾಗುವುದರ ಜೊತೆಗೆ, ರಸ್ತೆ ಸುರಕ್ಷತೆಗೂ ಧಕ್ಕೆಯಾಗಬಹುದು. ಅಲ್ಲದೆ, ಅಪ್ರಾಪ್ತರಿಗೆ ವಾಹನ ನೀಡುವ ಮಾಲೀಕರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ.

ಹೀಗಾಗಿ, ಮಕ್ಕಳಿಗೆ ಬೈಕ್ ಅಥವಾ ಸ್ಕೂಟರ್ ನೀಡುವ ಮುನ್ನ ಪೋಷಕರು ಹಾಗೂ ವಾಹನ ಮಾಲೀಕರು ಕಾನೂನು ನಿಯಮಗಳನ್ನು ಪಾಲಿಸಬೇಕು. ಅಪ್ರಾಪ್ತರು ವಾಹನ ಚಲಾಯಿಸುವುದನ್ನು ತಡೆಯುವ ಮೂಲಕ ಅಪಘಾತಗಳನ್ನು ತಪ್ಪಿಸಲು ಸಹಕರಿಸಬೇಕು ಎಂದು ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

error: Content is protected !!