ಬಾಳೆಹೊನ್ನೂರು ; ಮುಂಬರುವ ಜನಗಣತಿ-ಜಾತಿಗಣತಿ ಸಂದರ್ಭದಲ್ಲಿ ಪಂಚ ಪೀಠಗಳ ನಿಲುವನ್ನು ಸ್ಪಷ್ಟಪಡಿಸುವ ಉದ್ದೇಶದಿಂದ ಮೇ 07ರ ಸಂಜೆ 7 ಗಂಟೆಗೆ ಮುಕ್ತಿಮಂದಿರ ಕ್ಷೇತ್ರದಲ್ಲಿ ಪಂಚ ಪೀಠಾಧೀಶರ ಸಮಾವೇಶ ನಡೆಯಲಿದ್ದು ಶ್ರೀ ಉಜ್ಜಯಿನಿ, ಶ್ರೀ ಕೇದಾರ, ಶ್ರೀ ಶ್ರೀಶೈಲ ಮತ್ತು ಶ್ರೀ ಕಾಶಿ ಜಗದ್ಗುರುಗಳವರಿಗೆ ಈ ಸಭೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಲಾಗಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಿಳಿಸಿದ್ದಾರೆ.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಶಾಮನೂರು ಶಿವಶಂಕರಪ್ಪನವರು ಜನಗಣತಿ-ಜಾತಿಗಣತಿ ಸಂದಿಗ್ಧ ಪ್ರಸಂಗದಲ್ಲಿ ಪೀಠಗಳು ಒಕ್ಕೂಟ ವ್ಯವಸ್ಥೆಗೆ ಮುಂದಾಗಬೇಕೆಂದು ಅಪೇಕ್ಷೆ ವ್ಯಕ್ತಪಡಿಸಿದ್ದರ ಹಿನ್ನೆಲೆಯಲ್ಲಿ ಮತ್ತು ಪೀಠಾಭಿಮಾನಿಗಳ-ಭಕ್ತರ ಒತ್ತಾಸೆಯ ಮೇರೆಗೆ ಈ ಸಭೆಯನ್ನು ಕರೆಯಲಾಗಿದೆ.
ಆಂತರಿಕ ಸಮಸ್ಯೆಗಳಿಗೆ ತಾರ್ಕಿಕವಾಗಿ ಅಂತ್ಯಗೊಳಿಸುವ ವಿಚಾರವನ್ನು ಈ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ತಿಳಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.