Balehonnuru

ಧರ್ಮಸ್ಥಳ ಪ್ರಕರಣ ಕುರಿತು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪಂಚಪೀಠಗಳ ಅಸಮಾಧಾನ | ನೈಜ ಆರೋಪಿಗಳ ಪತ್ತೆಗೆ ಆಗ್ರಹ

ಬಾಳೆಹೊನ್ನೂರು ; ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಪಂಚಪೀಠಗಳ ಜಗದ್ಗುರುಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಶನಿವಾರ ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು, ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳು, ಶ್ರೀ ಕೇದಾರ ಭೀಮಾಶಂಕರ ಜಗದ್ಗುರುಗಳು, ಶ್ರೀಶೈಲ ಡಾ.ಚನ್ನಸಿದ್ಧರಾಮ ಜಗದ್ಗುರುಗಳು, ಶ್ರೀ ಕಾಶೀ ಡಾ.ಚಂದ್ರಶೇಖರ ಜಗದ್ಗುರುಗಳು, ನೂತನ ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಜಗದ್ಗುರುಗಳು ಧರ್ಮ ಕ್ಷೇತ್ರಗಳು ತಮ್ಮದೇ ಆದ ಸಂಸ್ಕೃತಿ ಮತ್ತು ಪರಂಪರೆಯನ್ನು ಅನುಸರಿಸುತ್ತವೆ. ಅಂತಹ ಧರ್ಮ ಕ್ಷೇತ್ರಗಳಲ್ಲಿ ರಾಜಕೀಯವನ್ನು ಬೆರೆಸುವ ಕೆಲಸ ಯಾರೂ ಮಾಡಬಾರದು.

ಅನಾವಶ್ಯಕವಾಗಿ ಧರ್ಮಸ್ಥಳದ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದು, ಭಕ್ತರ ಮತ್ತು ಸಮಾಜದ ಹಾಗೂ ಸರ್ಕಾರದ ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದೆ. ಸನಾತನ ಧರ್ಮ ತೇಜೋವಧೆಗೆ ಕಾಣದ ಕೈಗಳು ಹುನ್ನಾರ ನಡೆಸಿವೆ. ಸರ್ಕಾರ ರಚನೆ ಮಾಡಿರುವ ವಿಶೇಷ ತನಿಖಾ ಸಂಸ್ಥೆಯು ಮೇಲ್ನೋಟಕ್ಕೆ ಆರೋಪಿಗಳಾಗಿರುವವರ ವಿಚಾರಣೆ ನಡೆಸುತ್ತಿದ್ದು, ಈ ಒಟ್ಟಾರೆ ಪ್ರಕರಣದ ಹಿಂದಿನ ಸೂತ್ರಧಾರಿಗಳನ್ನು ಪತ್ತೆಹಚ್ಚಿ ಆದಷ್ಟು ಬೇಗ ಅವರಿಗೆ ಶಿಕ್ಷೆ ನೀಡುವಂತಾಗಬೇಕು ಎಂದು ಆಗ್ರಹಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ನಾಡಿನಲ್ಲಿರುವ ಅನೇಕ ಮಠ-ಮಂದಿರಗಳು ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಪ್ರಾಚೀನ ಕಾಲದಿಂದಲೂ ಕಾರ್ಯ ನಿರ್ವಹಿಸಿಕೊಂಡು ಬಂದಿವೆ. ಅಂತೆಯೇ ಧರ್ಮಸ್ಥಳ ಕ್ಷೇತ್ರ ಶತಮಾನಗಳ ಇತಿಹಾಸ ಹೊಂದಿದ್ದು ನಾಡಿಗೆ ವಿಶೇಷ ಕೊಡುಗೆ ನೀಡಿದೆ. ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಕಳೆದ 50 ವರ್ಷಗಳಿಂದ ಧರ್ಮ ಸಂಸ್ಕೃತಿ ಪುನುರುತ್ಥಾನಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ.

ಇಂತಹ ಕ್ಷೇತ್ರದ ಮೇಲೆ ಬಂದಿರುವ ಆರೋಪಗಳು ಮುಕ್ತವಾಗಿ ಆದಷ್ಟು ಬೇಗ ಮೊದಲಿನಂತೆ ಎಲ್ಲ ಸಾಮಾಜಿಕ ಕಾರ್ಯಗಳು ಮುಂದುವರೆಯುವಂತಾಗಲಿ ಎಂದು ಹಾರೈಸಿರುವ ಜಗದ್ಗುರು, ಪಂಚಪೀಠಾಧೀಶ್ವರರು ಹಿಂದೂ ಸಂಸ್ಕೃತಿಯ ಬಗ್ಗೆ ಇತ್ತೀಚಿಗೆ ಕೆಲವು ನಾಸ್ತಿಕರು ಅಲ್ಲಲ್ಲಿ ವಾತಾವರಣ ಕಲುಷಿತಗೊಳಿಸುವ ಕೆಲಸ ಮಾಡುತ್ತಿದ್ದಾರೆ ಅಂತವರನ್ನು ಗುರುತಿಸಿ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಇದೇ ವೇಳೆ ಆಗ್ರಹಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]