Chikmagaluru News

5 ಸಾವಿರ ರೂ. ಲಂಚ ಸ್ವೀಕರಿಸುವಾಗ ಪಿಡಿಒ ಲೋಕಾ ಬಲೆಗೆ !

ಕಡೂರು ; 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಂಗ್ಲಿ ಗ್ರಾಮ ಪಂಚಾಯತಿಯ ಪಿಡಿಒ ನಂಜುಂಡಮ್ಮ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಸರಸ್ವತಿಪುರದ ತಿಮ್ಮಶೆಟ್ಟಿ ಎಂಬುವವರಿಂದ ಸೈಟ್‌ಗೆ ದೃಢೀಕರಣ ಪತ್ರ ನೀಡಲು ಲಂಚದ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ.

ಲೋಕಾಯುಕ್ತ ಡಿವೈಎಸ್‌ಪಿ ತಿರುಮಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

error: Content is protected !!