ರಿಪ್ಪನ್‌ಪೇಟೆ ; ಇತ್ತೀಚಿನ ದಿನಗಳಲ್ಲಿ ನಮ್ಮ ಯುವ ಜನಾಂಗ ಒತ್ತಡದ ಬದುಕಿನಲ್ಲಿ ಧಾರ್ಮಿಕ ಆಚರಣೆಯಿಂದ ದೂರವಾಗುತ್ತಿದ್ದಾರೆಂದು ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಕಳವಳ ವ್ಯಕ್ತಪಡಿಸಿದರು.
ಜಳಬೈಲು ಶ್ರೀಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಶ್ರೀಮಲ್ಲಿಕಾರ್ಜುನ ಸ್ವಾಮಿಯ ಪ್ರತಿಷ್ಠಾವರ್ಧಂತೋತ್ಸವ ಧರ್ಮ ಸಮಾರಂಭದಲ್ಲಿ ಶ್ರೀ ಸ್ವಾಮಿಗೆ ರುದ್ರಾಭಿಷೇಕ ನೇರವೇರಿಸಿ ಆಶೀರ್ವಚನ ನೀಡಿ, ಉದ್ಯೋಗದ ಒತ್ತಡದಲ್ಲಿ ಧಾರ್ಮಿಕ ಆಚರಣೆಗಳಲ್ಲಿ ಮತ್ತು ಪೋಷಕರ ಪಾಲನೆ ಪೋಷಣೆಯಲ್ಲಿ ನಮ್ಮ ಮಕ್ಕಳು ದೂರವಾಗುತ್ತಿದ್ದಾರೆ. ವರ್ಷದಲ್ಲಿ ಒಮ್ಮೆಯಾದರೂ ತಮ್ಮ ಮನೆ ದೇವರ ಮತ್ತು ಧರ್ಮಾಚರಣೆಯ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಭಗವಂತನ ಧ್ಯಾನ ಮಾಡಿದರೆ ಪುಣ್ಯ ಪ್ರಾಪ್ತಿಯಾಗುವ ಮೂಲಕ ನೆಮ್ಮದಿಯನ್ನು ಕಾಣಬಹುದಾಗಿದೆ ಎಂದರು.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಸೇವಾ ಸಮಿತಿಯವರು ಮತ್ತು ಜಗಳಬೈಲು, ಮುನಿಯೂರು, ಹುಂಚದಕಟ್ಟೆ ಸುತ್ತಮುತ್ತಲಿನ ನೂರಾರು ಭಕ್ತರು ಪಾಲ್ಗೊಂಡಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





