ಹೊಸನಗರ ; ಚಿಕ್ಕಮಗಳೂರು ಜಿಲ್ಲೆಯ ಗ್ರಾಮ ಆಡಳಿತಾಧಿಕಾರಿಗಳ ಮೇಲೆ ನಡೆಸುತ್ತಿರುವ ಅಧಿಕಾರಿಗಳ ದೌರ್ಜನ್ಯದ ಕುರಿತು ಕಿರುಕುಳ ನೀಡುತ್ತಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಹೊಸನಗರದ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಅಧ್ಯಕ್ಷರಾದ ನವೀನ್ ನೇತೃತ್ವದಲ್ಲಿ ಹೊಸನಗರದ ತಹಶೀಲ್ದಾರ್ ರಶ್ಮಿ ಹಾಲೇಶ್‌ರಿಗೆ ಮನವಿ ಪತ್ರ ಸಲ್ಲಿಸಿ ರಾಜ್ಯ ಸರ್ಕಾರಕ್ಕೆ ಹಾಗೂ ಕಂದಾಯ ಸಚಿವರಿಗೆ ಕಳುಹಿಸುವಂತೆ ವರ್ಗಾವಣೆ ಮಾಡದಿದ್ದರೆ ಫೆ. 3ರಿಂದ ಹೋರಾಟ ಅನಿವಾರ್ಯ ಎಂದು ಹೇಳಿದರು.
ಮನವಿ ಪತ್ರ ಸಲ್ಲಿಸಿ ಮಾತನಾಡಿದ ನವೀನ್, ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಕನಕರೆಡ್ಡಿಯವರು ಜನವರಿ 24ರಂದು ಗ್ರಾಮ ಆಡಳಿತಾಧಿಕಾರಿಗಳ ಸಭೆಯನ್ನು ತೆಗೆದುಕೊಂಡು ಜಿಲ್ಲೆಯ 29 ಗ್ರಾಮದ ಅಧಿಕಾರಿಗಳನ್ನು ಯಾವುದೇ ತಿಳುವಳಿಕೆ ನೀಡದೆ ವಿಚಾರಣೆ ನಡೆಸದೆ ಏಕಾಏಕಿ ಸಂಚಿತ ಪರಿನಾಮರಹಿತವಾಗಿ ಒಂದು ವಾರ್ಷಿಕ ವೇತನ ಬಡ್ತಿಯನ್ನು ಕಡಿತಗೊಳಿಸಿ ದಂಡನೆ ವಿಧಿಸಿ ಆದೇಶಿಸಿದ್ದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ತಕ್ಷಣ ರಾಜ್ಯ ಸರ್ಕಾರ ಮಧ್ಯೆ ಪ್ರವೇಶಿಸಿ ಚಿಕ್ಕಮಗಳೂರು ಜಿಲ್ಲೆಯ ಗ್ರಾಮ ಆಡಳಿತಾಧಿಕಾರಿಗಳ ಪರ ನ್ಯಾಯ ಒದಾಗಿಸಬೇಕು ಇಲ್ಲವಾದರೇ ಮುಂದಿನ ದಿನದಲ್ಲಿ ರಾಜ್ಯಾದ್ಯಂತ ಗ್ರಾಮ ಆಡಳಿತಾಧಿಕಾರಿಗಳ ಹೋರಾಟ ಅನಿವಾರ್ಯ ಎಂದರು.
ಶಿರಾಸ್ಥೆದಾರ್ ಮಂಜುನಾಥ್ ಕಟ್ಟೆ ಗ್ರಾಮ ಆಡಳಿತಾಧಿಕಾರಿಗಳಾದ ರೇಣುಕಯ್ಯ, ಸಿದ್ದಪ್ಪ, ಫೈಗಂಬರ್, ನಾರಾಯಣ, ಬಸವರಾಜ್, ಅನುಷ, ಶ್ರೀವಲ್ಲಿ, ಮೇಘನಾ, ಸೌಮ್ಯ ಜಾಗೃತಿ, ಹೇಮಾ, ಲೋಹಿತ್, ಮಂಜುನಾಥ್, ಜಾಕೀರ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.