ಮಲೆನಾಡು ಪ್ರದೇಶದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಮನವಿ – ಸಂಸದ ಬಿ.ವೈ. ರಾಘವೇಂದ್ರ

Written by Koushik G K

Updated on:

ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್‌ ಸಿಂಗ್‌ ಚೌವಾಣ್ ಅವರನ್ನು ಭೇಟಿಯಾಗಿ ಮಹತ್ವದ ಮನವಿಯೊಂದನ್ನು ಸಲ್ಲಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಬಿ.ವೈ. ರಾಘವೇಂದ್ರ ಅವರು ತಮ್ಮ ಮನವಿಯಲ್ಲಿ,”ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳ ಕೆಲ ತಾಲ್ಲೂಕುಗಳು ಮಲೆನಾಡು ಮತ್ತು ಅರೆ ಮಲೆನಾಡು ಪ್ರದೇಶಗಳಲ್ಲಿ ಬರುತ್ತವೆ. ಇತ್ತೀಚಿನ ಭಾರಿ ಮಳೆಯ ಪರಿಣಾಮವಾಗಿ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರು ತೀವ್ರ ತೊಂದರೆಗೆ ಒಳಗಾಗುತ್ತಿದ್ದಾರೆ,” ಎಂದು ವಿವರಿಸಿದರು.

341 ಕಿಲೋ ಮೀಟರ್ ರಸ್ತೆಗಳಿಗೆ ಮರು ಡಾಂಬರೀಕರಣದ ಪ್ರಸ್ತಾವನೆ:

ಸಂಪೂರ್ಣವಾಗಿ ಹಾಳಾದ ಗ್ರಾಮೀಣ ರಸ್ತೆಗಳ ಪುನರ್ ನಿರ್ಮಾಣಕ್ಕಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆ (PMGSY) ಅಡಿಯಲ್ಲಿ ಒಟ್ಟು 341 ಕಿಮೀ ರಸ್ತೆಗಳಿಗೆ ಮರು ಡಾಂಬರೀಕರಣ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ.

ಅಮಿತ್ ಷಾ ಅವರನ್ನು ಭೇಟಿಯಾದ ಬಿ.ವೈ. ರಾಘವೇಂದ್ರ

ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಅವರು ಇಂದು ನವದಹಲಿಯಲ್ಲಿ ಭಾರತ ಸರ್ಕಾರದ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ, ಅತೀ ಹೆಚ್ಚು ವರ್ಷಗಳ ಕಾಲ ಭಾರತ ದೇಶದ ಗೃಹ ಸಚಿವರಾಗಿ ದಕ್ಷ ಮತ್ತು ಪ್ರಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು.

ತಮ್ಮಡಿಹಳ್ಳಿಯಲ್ಲಿ ರಕ್ಷಾ ವಿಶ್ವವಿದ್ಯಾಲಯ – ಅನುದಾನಕ್ಕೆ ಮನವಿ

ಶಿವಮೊಗ್ಗ ತಾಲ್ಲೂಕು ತಮ್ಮಡಿಹಳ್ಳಿ ಗ್ರಾಮದಲ್ಲಿ 22 ಎಕರೆ 19 ಗುಂಟೆ ಜಾಗವು ಮಂಜೂರಾಗಿದ್ದು, ಸದರಿ ಜಾಗದಲ್ಲಿ ಖಾಯಂ ಆಗಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಹೊಂದಲು ಅನುಕೂಲವಾಗುವಂತೆ ವಿಶ್ವವಿದ್ಯಾಲಯದ ಕಟ್ಟಡ ನಿರ್ಮಾಣ, ವಸತಿ ಗೃಹಗಳು, ಕಾಂಪೌಂಡ್ ನಿರ್ಮಾಣ ಹಾಗೂ ಇನ್ನಿತರೆ ಸೌಲಭ್ಯಗಳನ್ನು ಕಲ್ಪಿಸುವ ಸಲುವಾಗಿ ಸೂಕ್ತ ಅನುದಾನವನ್ನು ನೀಡುವಂತೆ ಕೋರಿಕೆ ಸಲ್ಲಿಸಿದರು.

Leave a Comment