ಅಪರಾಧ ಸುದ್ದಿ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ : ರಿಪ್ಪನ್‌ಪೇಟೆ ಠಾಣೆಯಲ್ಲಿ ದಂಪತಿಗಳ ವಿರುದ್ಧ ಪೋಕ್ಸೋ ಕೇಸ್ ದಾಖಲು

ರಿಪ್ಪನ್‌ಪೇಟೆ : ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ದಾಖಲಾಗಿದ್ದು, ದಂಪತಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Instagram Group Join Now

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ನೇತೃತ್ವದಲ್ಲಿ ತಂಡವು ಈ ಗಂಭೀರ ಪ್ರಕರಣದ ಬಗ್ಗೆ ತಕ್ಷಣ ಕ್ರಮ ಕೈಗೊಂಡು, ರಾತ್ರೋರಾತ್ರಿ ಕಾರ್ಯಾಚರಣೆ ನಡೆಸುವ ಮೂಲಕ ಹಲವರನ್ನು ಬಂಧಿಸಿ ವಿಚಾರಣೆ ನಡೆಸಿತು. ಮಾಹಿತಿ ಪ್ರಕಾರ, ಕೂಲಿ ಕೆಲಸ ಮಾಡುವ ವಿವಾಹಿತ ವ್ಯಕ್ತಿಯೊಬ್ಬನು ಅಪ್ರಾಪ್ತೆ ಮೇಲೆ ಅನೇಕ ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದೆ.

ತದನಂತರ ನಡೆದ ತನಿಖೆಯಲ್ಲಿ, ಆತನ ಪತ್ನಿಯೂ ಈ ದೌರ್ಜನ್ಯಕ್ಕೆ ಸಹಾಯ ಮಾಡಿದ ಕಾರಣ, ಆಕೆಯ ಮೇಲೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇನ್ನು, ಅಕ್ಕಪಕ್ಕದ ಕೆಲವು ಯುವಕರು ಕೂಡಾ ಬಾಲಕಿಯ ಮೇಲೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಪ್ರಯತ್ನ ನಡೆಸಿರುವುದಾಗಿ ದೂರಿನಲ್ಲಿ ತಿಳಿದು ಬಂದಿದೆ. ಈ ಆರೋಪಗಳ ಸತ್ಯಾಸತ್ಯತೆ ಕುರಿತು ಪ್ರತ್ಯೇಕ ತನಿಖೆ ನಡೆಯುತ್ತಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಪೊಲೀಸರು ಪ್ರಕರಣದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟು, ಸಂಬಂಧಪಟ್ಟ ಎಲ್ಲಾ ವ್ಯಕ್ತಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಅಪ್ರಾಪ್ತೆಯ ವೈದ್ಯಕೀಯ ಪರಿಶೀಲನೆ ಕೂಡಾ ನಡೆಯಲಿದ್ದು ಕಾನೂನು ಪ್ರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಈ ಪ್ರಕರಣ ಸಂಬಂಧ ರಿಪ್ಪನ್‌ಪೇಟೆ ಪೊಲೀಸರು ತನಿಖೆಯನ್ನು ಮುಂದುವರೆಸಿ, ಆರೋಪಿಗಳ ಹಸ್ತಕ್ಷೇಪ, ಘಟನೆಯ ಹಿನ್ನೆಲೆ ಹಾಗೂ ಇತರ ಸಂಬಂಧಿಸಿದ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. ತನಿಖೆಯ ಅಂತಿಮ ವರದಿಯ ನಂತರ ಹೆಚ್ಚಿನ ವಿವರಗಳು ಬಹಿರಂಗವಾಗಲಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]