ಶಿವಮೊಗ್ಗ ; ದೊಡ್ಡಪೇಟೆ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಠಾಣೆಯಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಮೊಹಮದ್ ಝಕ್ರಿಯ (55) ನೇಣಿಗೆ ಶರಣಾದ ಹೆಡ್ ಕಾನ್‌ಸ್ಟೇಬಲ್. ಕಳೆದ ಕೆಲವು ದಿನದಿಂದ ಮೊಹಮದ್ ಝಕ್ರಿಯ ಅವರು ರಜೆ ತೆಗೆದುಕೊಂಡಿದ್ದರು. ಈಗ ಮೂರು ದಿನದ ಹಿಂದಷ್ಟೆ ಡ್ಯೂಟಿಗೆ ಬಂದಿದ್ದರು. ನಿನ್ನೆ ರಾತ್ರಿ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಡ್ಯೂಟಿ ನಿರ್ವಹಿಸಿ ಠಾಣೆಗೆ ವಾಪಸಾಗಿದ್ದರು ಎಂದು ಮೂಲಗಳು ತಿಳಿಸಿವೆ.
ರಾತ್ರಿ ಠಾಣೆಯಲ್ಲೇ ಮೊಹಮದ್ ಝಕ್ರಿಯ ಅವರು ನೇಣಿಗೆ ಕೊರಳೊಡ್ಡಿದ್ದಾರೆ. ಠಾಣೆಯ ಹಿಂಬದಿಯ ಸೆಲ್‌ಗಳಿರುವ ಜಾಗದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
‘ಅವರಿಗೆ ಅರೋಗ್ಯ ಸಮಸ್ಯೆಯೂ ಇತ್ತು. ವಾಟ್ಸಪ್ ಗ್ರೂಪ್ ನಲ್ಲಿ ಡೆತ್‌ನೋಟ್ ಫಾರ್ವರ್ಡ್ ಮಾಡಿದ್ದಾರೆ. ಅದರಲ್ಲಿ ಠಾಣೆಯ ಸಿಬ್ಬಂದಿ ಕಿರುಕುಳ ನೀಡುತ್ತಿದ್ದರು ಅಂತ ಉಲ್ಲೇಖವಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅವರ ಕುಟುಂಬದವರ ಗಮನಕ್ಕೆ ತಂದಿದ್ದೇವೆ. ಅವರ ಕುಟುಂಬದವರು ದೂರು ಕೊಟ್ಟ ಬಳಿಕ ವಿಚಾರಣೆ ನಡೆಸುತ್ತೇವೆ.’
– ನಿಖಿಲ್ ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





