ಅಪರಾಧ ಸುದ್ದಿ

ದರೋಡೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್ !

ಶಿಕಾರಿಪುರ ; ದರೋಡೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಆರೋಪಿ ಶ್ರೀನಿವಾಸ್ (25) ಕಾಲಿಗೆ ಪೊಲೀಸರ ಗುಂಡು ಹಾರಿಸಿ ಬಂಧಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮಹಿಷಿ ಮಠ ಹಾಗೂ ಇತರೆಡೆಗಳಲ್ಲಿ ಡಕಾಯಿತಿ ನಡೆಸಿದ್ದ ಆರೋಪಿ ಶ್ರೀನಿವಾಸ್ ನನ್ನು ಬಂಧಿಸಲೆಂದು ಮಾಳೂರು ಠಾಣೆ ಪೊಲೀಸರು ತೆರಳಿದ್ದರು. ಶಿಕಾರಿಪುರ ಸಮೀಪದ ಕೆಂಗುಡ್ಡೆ ಬಳಿ ಘಟನೆ ಈ ನಡೆದಿದೆ.

ಆರೋಪಿ ಶ್ರೀನಿವಾಸ ಪೊಲೀಸ್ ಸಿಬ್ಬಂದಿ ಪೊಲೀಸ್ ಸಿಬ್ಬಂದಿ ಸಂತೋಷ್ ಹಾಗೂ ಪಿಎಸ್ಐ ಕುಮಾರ್ ಮೇಲೆ ಹಲ್ಲೆ ನಡೆಸಿ, ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಈ ವೇಳೆ ಶ್ರೀನಿವಾಸ್ ಗೆ ಶರಣಾಗಲು ಸಬ್ ಇನ್ಸ್ಪೆಕ್ಟರ್ ಕುಮಾರ್ ಸೂಚಿಸಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಸೂಚನೆ ನೀಡಿದರೂ ಮಾತು ಕೇಳದ ಹಿನ್ನೆಲೆಯಲ್ಲಿ ಪಿಎಸ್ಐ ಕುಮಾರ್ ಆರೋಪಿ ಕಾಲಿಗೆ ಫೈರಿಂಗ್‌ ಮಾಡಿದ್ದಾರೆ. ಬಳಿಕ ಆರೋಪಿ ಶ್ರೀನಿವಾಸ್ ನನ್ನು ಬಂಧಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಘಟನೆ ಸಂಬಂಧ ಶಿಕಾರಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]