ಶಿಕಾರಿಪುರ ; ದರೋಡೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ.
ಆರೋಪಿ ಶ್ರೀನಿವಾಸ್ (25) ಕಾಲಿಗೆ ಪೊಲೀಸರ ಗುಂಡು ಹಾರಿಸಿ ಬಂಧಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮಹಿಷಿ ಮಠ ಹಾಗೂ ಇತರೆಡೆಗಳಲ್ಲಿ ಡಕಾಯಿತಿ ನಡೆಸಿದ್ದ ಆರೋಪಿ ಶ್ರೀನಿವಾಸ್ ನನ್ನು ಬಂಧಿಸಲೆಂದು ಮಾಳೂರು ಠಾಣೆ ಪೊಲೀಸರು ತೆರಳಿದ್ದರು. ಶಿಕಾರಿಪುರ ಸಮೀಪದ ಕೆಂಗುಡ್ಡೆ ಬಳಿ ಘಟನೆ ಈ ನಡೆದಿದೆ.

ಆರೋಪಿ ಶ್ರೀನಿವಾಸ ಪೊಲೀಸ್ ಸಿಬ್ಬಂದಿ ಪೊಲೀಸ್ ಸಿಬ್ಬಂದಿ ಸಂತೋಷ್ ಹಾಗೂ ಪಿಎಸ್ಐ ಕುಮಾರ್ ಮೇಲೆ ಹಲ್ಲೆ ನಡೆಸಿ, ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಈ ವೇಳೆ ಶ್ರೀನಿವಾಸ್ ಗೆ ಶರಣಾಗಲು ಸಬ್ ಇನ್ಸ್ಪೆಕ್ಟರ್ ಕುಮಾರ್ ಸೂಚಿಸಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಸೂಚನೆ ನೀಡಿದರೂ ಮಾತು ಕೇಳದ ಹಿನ್ನೆಲೆಯಲ್ಲಿ ಪಿಎಸ್ಐ ಕುಮಾರ್ ಆರೋಪಿ ಕಾಲಿಗೆ ಫೈರಿಂಗ್ ಮಾಡಿದ್ದಾರೆ. ಬಳಿಕ ಆರೋಪಿ ಶ್ರೀನಿವಾಸ್ ನನ್ನು ಬಂಧಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಸಂಬಂಧ ಶಿಕಾರಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.