ಭದ್ರಾವತಿ : ದಾರಿಯಲ್ಲಿ ಸಾಗುವ ಪ್ರಯಾಣಿಕರನ್ನು ಸುಲಿಗೆ ಅಥವಾ ದರೋಡೆ ಮಾಡಲು ರೌಡಿಗಳ ಗ್ಯಾಂಗೊಂದು ಹೊಂಚು ಹಾಕಿಕೊಂಡಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಭದ್ರಾವತಿ ಪೊಲೀಸರು ಕಾರ್ಯಾಚರಣೆ ನಡೆಸಿದ ವೇಳೆ, ರೌಡಿಗಳು ಪೊಲೀಸರ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಕಾರಣ ಪೊಲೀಸ್ ಫೈರಿಂಗ್ ನಡೆದಿದೆ. ಈ ಘಟನೆಯಲ್ಲಿ ಒಬ್ಬ ರೌಡಿಯ ಕಾಲಿಗೆ ಗುಂಡೇಟು ತಗುಲಿದ್ದು, ಹಲವಾರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ.
ಪೊಲೀಸರು ಡಿಚ್ಚಿ ಮುಭಾರಕ್ ಹಾಗೂ ಆತನ ತಂಡವನ್ನು ಬಂಧಿಸಲು ಮುಂದಾದಾಗ, ಆರೋಪಿಗಳು ಚಾಕುವಿನಿಂದ ಪೊಲೀಸರಿಗೆ ತಿವಿದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಆತ್ಮರಕ್ಷಣಾರ್ಥವಾಗಿ ಪೊಲೀಸರು ಗುಂಡು ಹಾರಿಸಿದ್ದು, ಒಬ್ಬ ಆರೋಪಿಗೆ ಕಾಲಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಪಿಎಸ್ಐ ಕೃಷ್ಣ ಕುಮಾರ್ ಮಾನೆ ಅವರ ಕೈ ಬೆರಳು ಮುರಿದು ಗಾಯವಾಗಿದ್ದು, ಇನ್ನೂ ಕೆಲ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಜಹೀರ್, ರಹಮತ್, ಜುನೈದ್ ಹಾಗೂ ಮನು ಸಿಂಗ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಕುರಿತು ಹಿರಿಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತೀರ್ಥಹಳ್ಳಿ : ದನಕಳ್ಳರ ಬಂಧನ, ರಿಡ್ಜ್ ಕಾರು ವಶಕ್ಕೆ
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650





