ಹೊಸನಗರ ; ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಂಜಪ್ಪ (59) ಬುಧವಾರ ರಾತ್ರಿ ಮೃತಪಟ್ಟ ಘಟನೆ ನಡೆದಿದೆ.
ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿಯಾಗಿದ್ದ ನಂಜಪ್ಪ ಅವರು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಸೋಮವಾರದಂದು ಕರ್ತವ್ಯದಲ್ಲಿರುವಾಗಲೇ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು. ಎರಡು ದಿನಗಳ ಕಾಲ ಚಿಕಿತ್ಸೆ ಪಡೆದರೂ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬಂದಿರಲಿಲ್ಲ.
ನಂಜಪ್ಪ ಈ ಹಿಂದೆ ಹೊಸನಗರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಆಗಿ ಬಳಿಕ ಶಿವಮೊಗ್ಗದ ವಿನೋಬನಗರ ರಾಣೆಯಲ್ಲಿ ಕಾರ್ಯನಿರ್ವಹಿಸಿ ನಂತರ ಪದೋನ್ನತಿ ಹೊಂದಿ ಕುಂದಾಪುರದ ಕರಾವಳಿ ಕಾವಲು ಪಡೆ ಗಂಗೊಳ್ಳಿಯಲ್ಲಿ ವೃತ್ತ ನಿರೀಕ್ಷಕರಾಗಿ ಸುಮಾರು ಎರಡು ವರ್ಷಗಳಿಂದ ಕಾರ್ಯನಿರ್ವಹಿಸಿದ್ದರು ಬಳಿಕ ಕುಂದಾಪುರ ಟೌನ್ ಠಾಣೆಗೆ ವರ್ಗಾವಣೆಗೊಂಡು ಅಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಮೃತರಿಗೆ ಇಬ್ಬರು ಮಕ್ಕಳಿದ್ದು ಪತ್ನಿ ಕೆಲ ವರ್ಷಗಳ ಹಿಂದೆ ತೀರಿಹೋಗಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.