ಕರ್ತವ್ಯ ಲೋಪ ಆರೋಪ ; ಪೊಲೀಸ್ ಇನ್ಸ್‌ಪೆಕ್ಟರ್ ಸಸ್ಪೆಂಡ್ !

Written by malnadtimes.com

Published on:

CHIKKAMAGALURU ; ಕರ್ತವ್ಯಲೋಪ ಎಸಗಿರುವ ಆರೋಪ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ರೇಣುಕಾ ಪ್ರಸಾದ್ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now

ಮೂಲತಃ ಚನ್ನಪಟ್ಟಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಓಓಡಿಯಲ್ಲಿ ಇನ್ಸ್‌ಪೆಕ್ಟರ್ ಆಗಿ ರೇಣುಕಾ ಪ್ರಸಾದ್ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ದನಗಳ್ಳರು ಪೊಲೀಸರಿಗೆ ಮಚ್ಚು ತೋರಿಸಿದ್ದು ಪೊಲೀಸ್ ಠಾಣೆ ಮೇಲೆ ಕಲ್ಲು ಎಸೆತ ಪ್ರಕರಣ, ವಕೀಲರು ಪೊಲೀಸರ ನಡುವಿನ ಸಂಘರ್ಷ ಸೇರಿ ಹಲವು ಘಟನೆಯಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಅಮಾನತುಗೊಳಿಸಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಆದೇಶ ಹೊರಡಿಸಿದ್ದಾರೆ.

ಸದ್ಯ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಆಗಿ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಚಿನ್ ಕುಮಾರ್ ಅವರನ್ನು ಪ್ರಭಾರಿಯಾಗಿ ನಿಯೋಜಿಸಲಾಗಿದೆ.

Leave a Comment