CHIKKAMAGALURU ; ಕರ್ತವ್ಯಲೋಪ ಎಸಗಿರುವ ಆರೋಪ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ರೇಣುಕಾ ಪ್ರಸಾದ್ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.
ಮೂಲತಃ ಚನ್ನಪಟ್ಟಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಓಓಡಿಯಲ್ಲಿ ಇನ್ಸ್‌ಪೆಕ್ಟರ್ ಆಗಿ ರೇಣುಕಾ ಪ್ರಸಾದ್ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ದನಗಳ್ಳರು ಪೊಲೀಸರಿಗೆ ಮಚ್ಚು ತೋರಿಸಿದ್ದು ಪೊಲೀಸ್ ಠಾಣೆ ಮೇಲೆ ಕಲ್ಲು ಎಸೆತ ಪ್ರಕರಣ, ವಕೀಲರು ಪೊಲೀಸರ ನಡುವಿನ ಸಂಘರ್ಷ ಸೇರಿ ಹಲವು ಘಟನೆಯಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಅಮಾನತುಗೊಳಿಸಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಆದೇಶ ಹೊರಡಿಸಿದ್ದಾರೆ.
ಸದ್ಯ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಆಗಿ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಚಿನ್ ಕುಮಾರ್ ಅವರನ್ನು ಪ್ರಭಾರಿಯಾಗಿ ನಿಯೋಜಿಸಲಾಗಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.