Ripponpete

ರಿಪ್ಪನ್‌ಪೇಟೆಯಲ್ಲಿ ಪೊಲೀಸ್ ಪಥಸಂಚಲನ

ರಿಪ್ಪನ್‌ಪೇಟೆ : ಇನ್ನೂ ಹಬ್ಬಗಳು ಎರಡು ತಿಂಗಳುಗಳಿರುವಾಗಲೇ ರಿಪ್ಪನ್‌ಪೇಟೆಯಲ್ಲಿ ಪೊಲೀಸ್ ಪಥ ಸಂಚಲನ ನಡೆಸುವುದರೊಂದಿಗೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು.

WhatsApp Group Join Now
Telegram Group Join Now
Instagram Group Join Now

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ನೇತೃತ್ವದಲ್ಲಿ ತಮ್ಮ ಪೊಲೀಸ್ ಸಿಬ್ಬಂದಿಗಳು ಹಾಗೂ ಎಸ್.ಎ.ಎಫ್ ವಿಶೇಷ ಪೊಲೀಸ್ ಪಡೆಯ ಪೊಲೀಸರು ಠಾಣೆಯಿಂದ ಹೊರಟು ವಿನಾಯಕ ವೃತ್ತದ ಮೂಲಕ ಹೊಸನಗರ-ಸಾಗರ-ತೀರ್ಥಹಳ್ಳಿ ಮತ್ತು ಶಿವಮೊಗ್ಗ ನಾಲ್ಕು ರಸ್ತೆಯಲ್ಲಿ ಜಾಥಾ ನಡೆಸುವುದರೊಂದಿಗೆ ಸಾರ್ವಜನಿಕರಲ್ಲಿ ಶಾಂತಿ ಸುವ್ಯವಸ್ಥೆಯ ಬಗ್ಗೆ ಜನಜಾಗೃತಿ ಮೂಡಿಸಿದರು.

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ, ಎಸ್.ಎ.ಎಫ್ ವಿಶೇಷ ಪೊಲೀಸ್ ಪಡೆಯ ಇನ್ಸ್‌ಪೆಕ್ಟರ್ ಕಿರಣ್ ಹಾಗೂ ಎಎಸ್‌ಐಗಳಾದ ಹಾಲಪ್ಪ ವಿನೋದ್ ಇನ್ನಿತರ ಸಿಬ್ಬಂದಿವರ್ಗ ಹಾಜರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]