ಅಪರಾಧ ಸುದ್ದಿ

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಿಢೀರ್ ದಾಳಿ ; 9 ಮಂದಿ ವಶಕ್ಕೆ

ರಿಪ್ಪನ್‌ಪೇಟೆ : ಅರಸಾಳು ಗ್ರಾಮದ ಮಾಣಿಕೆರೆ ಸಮೀಪದ ನೀಲಗಿರಿ ತೋಪಿನಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ 9 ಜನರ ತಂಡದ ಮೇಲೆ ರಿಪ್ಪನ್‌ಪೇಟೆ ಪೊಲೀಸರು ದಿಢೀರ್ ದಾಳಿ ನಡೆಸಿ ಜೂಜಾಟದಲ್ಲಿ ತೊಡಗಿದ 9 ಜನರನ್ನು ಮತ್ತು ನಗದು ಹಣ ಹಾಗೂ ಬಳಸುತ್ತಿದ್ದ ಸಾಮಗ್ರಿಗಳನ್ನು ಜಪ್ತಿ ಮಾಡಿ ತಮ್ಮ ವಶಕ್ಕೆ ಪಡೆದಿದ್ದಾರೆ.

WhatsApp Group Join Now
Telegram Group Join Now
Instagram Group Join Now

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ನೇತೃತ್ವದ ತಂಡವು ಠಾಣಾ ವ್ಯಾಪ್ತಿಯ ದೂನ ಬೆನವಳ್ಳಿ ಹಾಗೂ ಅರಸಾಳು ಗ್ರಾಮಗಳಲ್ಲಿ ಗಸ್ತು ತಿರುಗುವ ಸಂದರ್ಭದಲ್ಲಿ ಅರಸಾಳು ಗ್ರಾಮದ ಮಾಣಿಕೆರೆ ಬಳಿಯ ಖಾಸಗಿ ಜಮೀನಿನ ಪಕ್ಕದ ನೀಲಗಿರಿ ಪ್ಲಾಂಟೆಷನ್‌ನಲ್ಲಿ ಕೆಲವರು ಹಣ ಪಣಕ್ಕಿಟ್ಟು ಅಕ್ರಮವಾಗಿ ಇಸ್ಪೀಟ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿ ಗುಂಪಿನ ಮೇಲೆ ದಾಳಿ ನಡೆಸಿದಾಗ ಜೂಜಾಟದಲ್ಲಿ ತೊಡಗಿದ 9 ಜನ ಅರೋಪಿಗಳನ್ನು ಮತ್ತು 3150 ರೂ. ನಗದು ಹಾಗೂ ಇಸ್ಪೀಟ್ ಕಾರ್ಡ್‌ಗಳನ್ನು ಆಟಕ್ಕೆ ಬಳಸಲಾದ ಪ್ಲಾಸ್ಟಿಕ್ ಟಾರ್ಪಲ್ ಮತ್ತು ಬೆಡ್‌ಶೀಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಪಿಎಸ್ಐ ರಾಜುರೆಡ್ಡಿ, ಪೊಲೀಸ್ ಸಿಬ್ಬಂದಿಗಳಾದ ವಿಶ್ವನಾಥ, ರಾಮಚಂದ್ರ ಹಾಗೂ ಅವಿನಾಶ್ ಪಾಲ್ಗೊಂಡಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!