ಶಿವಮೊಗ್ಗ

ಖಾಸಗಿ ಬಸ್‌ನಲ್ಲಿ ಬಿಟ್ಟಿದ್ದ ₹ 2 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಮಹಿಳೆಗೆ ಮರಳಿಸಿದ ಶಿವಮೊಗ್ಗ ಪೊಲೀಸರು

ಕಳೆದುಹೋಗಿದ್ದ ಬ್ಯಾಗನ್ನು ಸುರಕ್ಷಿತವಾಗಿ ಮಹಿಳೆಗೆ ಹಿಂದಿರುಗಿಸುವ ಮೂಲಕ ಪೊಲೀಸರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಖಾಸಗಿ ಬಸ್‌ನಲ್ಲಿ ಬಿಟ್ಟಿದ್ದ ₹ 2 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಮಹಿಳೆಗೆ ಮರಳಿಸಿದ ಪೊಲೀಸರು Police

ಶಿವಮೊಗ್ಗ: ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೊಬ್ಬರು ಮರೆತು ಬಿಟ್ಟು ಹೋಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಇದ್ದ ಬ್ಯಾಗನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಪತ್ತೆ ಹಚ್ಚುವಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದುಹೋಗಿದ್ದ ಬ್ಯಾಗನ್ನು ಸುರಕ್ಷಿತವಾಗಿ ಮಹಿಳೆಗೆ ಹಿಂದಿರುಗಿಸುವ ಮೂಲಕ ಪೊಲೀಸರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now

​ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅಲಸೂರು ಗೇಟ್ ಮೂಲದ ಮಹಿಳೆಯೊಬ್ಬರು ಅಕ್ಟೋಬರ್ 06 ರಂದು ಶಿವಮೊಗ್ಗದಿಂದ ತರೀಕೆರೆಗೆ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ತಮ್ಮ ಊರು ತಲುಪಿದ ನಂತರ ಆಕಸ್ಮಿಕವಾಗಿ ತಮ್ಮ ಬ್ಯಾಗನ್ನು ಬಸ್‌ನಲ್ಲೇ ಬಿಟ್ಟು ಇಳಿದಿದ್ದರು. ಈ ಬ್ಯಾಗ್‌ನಲ್ಲಿ 2 ಲಕ್ಷ ರೂ. ಮೌಲ್ಯದ ಬಂಗಾರದ ಒಡವೆಗಳು, 60 ಸಾವಿರ ರೂ. ನಗದು ಹಾಗೂ ಒಂದು ಮೊಬೈಲ್ ಫೋನ್ ಇತ್ತು.

​ಬ್ಯಾಗ್ ಕಳೆದುಕೊಂಡಿದ್ದನ್ನು ಅರಿತು ಆತಂಕಕ್ಕೊಳಗಾದ ಮಹಿಳೆ ತಕ್ಷಣವೇ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ. ದೂರು ಸ್ವೀಕರಿಸಿದ ಕೂಡಲೇ ಕಾರ್ಯಪ್ರವೃತ್ತರಾದ ದೊಡ್ಡಪೇಟೆ ಠಾಣೆಯ ಹೆಡ್ ಕಾನ್‌ಸ್ಟೇಬಲ್ (ಹೆಚ್.ಸಿ) ಮಂಜಪ್ಪ ಹಾಗೂ ಪೊಲೀಸ್ ಕಾನ್‌ಸ್ಟೇಬಲ್ (ಪಿ.ಸಿ) ಚಂದ್ರನಾಯ್ಕ ಅವರು ತ್ವರಿತ ಕಾರ್ಯಾಚರಣೆ ಕೈಗೊಂಡರು.

​ತಕ್ಷಣವೇ ಆ ಮಾರ್ಗದಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ಅನ್ನು ಬೆನ್ನಟ್ಟಿ ಪತ್ತೆ ಹಚ್ಚಿದ ಪೊಲೀಸರು, ಮಹಿಳೆ ಬಿಟ್ಟಿದ್ದ ಬ್ಯಾಗನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ, ನಗದು ಹಾಗೂ ಮೊಬೈಲ್ ಅನ್ನು ಪರಿಶೀಲಿಸಿ, ಠಾಣೆಗೆ ಕರೆಸಿ ಮಹಿಳೆಗೆ ಸುರಕ್ಷಿತವಾಗಿ ಹಸ್ತಾಂತರಿಸಿದ್ದಾರೆ. ​

ತಮ್ಮ ಬೆಲೆಬಾಳುವ ವಸ್ತುಗಳು ಮರಳಿ ಸಿಕ್ಕಿದ್ದಕ್ಕೆ ಮಹಿಳೆ ಹರ್ಷ ವ್ಯಕ್ತಪಡಿಸಿದ್ದು, ಪೊಲೀಸರ ಈ ಸಮಯಪ್ರಜ್ಞೆ, ತ್ವರಿತ ಸ್ಪಂದನೆ ಹಾಗೂ ಪ್ರಾಮಾಣಿಕ ಕರ್ತವ್ಯ ನಿಷ್ಠೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!