Post Office Scholarship:ಭಾರತೀಯ ಅಂಚೆ ಇಲಾಖೆಯು ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿ 2023-24ನೇ ಶೈಕ್ಷಣಿಕ ವರ್ಷದಲ್ಲಿ 60% ಅಂಕ ಗಳಿಸಿದ 6 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅಂಚೆಚೀಟಿ ಸಂಗ್ರಹಣೆಯಲ್ಲಿ ವಿದ್ಯಾರ್ಥಿಗಳ ಆಸಕ್ತಿ ಮತ್ತು ಪ್ರೀತಿಯನ್ನು ಹುಟ್ಟುಹಾಕುವುದು ಮತ್ತು ಅದನ್ನು ಹವ್ಯಾಸವಾಗಿ ಮುಂದುವರಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳು ವಾರ್ಷಿಕ ರೂ 6,000 ವಿದ್ಯಾರ್ಥಿವೇತನವನ್ನು ಪಡೆಯುತ್ತಾರೆ.

ಪರೀಕ್ಷೆಯ ಮೊದಲ ಹಂತದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಪೋಸ್ಟ್ ಆಫೀಸ್ ಸ್ಟಾಂಪ್ ಸಂಗ್ರಹಿಸುವ ಯೋಜನೆಯಲ್ಲಿ ಯಶಸ್ವಿಯಾಗಿ ಭಾಗವಹಿಸಬೇಕು.
ಅಂಚೆಚೀಟಿ ಸಂಗ್ರಹಿಸುವ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಜಿಗಳನ್ನು Sep 30 ರೊಳಗಾಗಿ ಖುದ್ದಾಗಿ/ಅಂಚೆ ಮೂಲಕ ಸಲ್ಲಿಸುವಂತೆ ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ ಜಿ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ, www.indiapost.gov.in ಮತ್ತು www.karnatakapost.gov.in ಗೆ ಭೇಟಿ ನೀಡಿ.
Read More
Ration card : ಪಡಿತರ ಚೀಟಿ ಹೊಂದಿರುವವರು ಈ ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಸಿಗಲ್ಲ ಉಚಿತ ಅಕ್ಕಿ !
PMKSY : ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಆಹ್ವಾನ !
ಅವರು MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 2019ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಅವರು ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಅವರು ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.