ಹೊಸನಗರ

ಹೊಸನಗರ ವ್ಯಾಪ್ತಿಯ ಜನರಿಗೆ ಬಿಗ್ ಅಲರ್ಟ್: ನಾಳೆ ಇಡೀ ದಿನ ಕರೆಂಟ್ ಕಟ್!

33 ಕೆ.ವಿ. ಸಾಗರ–ಹೊಸನಗರ ವಿದ್ಯುತ್ ಮಾರ್ಗದ ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ, ನವೆಂಬರ್ 22ರ (ಭಾನುವಾರ) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ತಾಲೂಕಿನ ವಿವಿಧ ಭಾಗಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

Power Cut

ಹೊಸನಗರ: 33 ಕೆ.ವಿ. ಸಾಗರ–ಹೊಸನಗರ ವಿದ್ಯುತ್ ಮಾರ್ಗದ ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ, ನವೆಂಬರ್ 22ರ (ಭಾನುವಾರ) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ತಾಲೂಕಿನ ವಿವಿಧ ಭಾಗಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

WhatsApp Group Join Now
Telegram Group Join Now
Instagram Group Join Now

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಸಾಗರದಿಂದ ಹೊಸನಗರಕ್ಕೆ ಸಂಪರ್ಕ ಕಲ್ಪಿಸುವ ವಿದ್ಯುತ್ ಮಾರ್ಗದ ವ್ಯಾಪ್ತಿಗೆ ಬರುವ ಜೇನಿ, ಹರಿದ್ರಾವತಿ, ಹರತಾಳು, ಪುರಪ್ಪೆಮನೆ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ, ಸೊನಲೆ, ಎಂ. ಗುಡ್ಡೆಕೊಪ್ಪ, ಕರಿನಗೊಳ್ಳಿ, ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳು ಹಾಗೂ ಹೊಸನಗರ ಪಟ್ಟಣ (ಟೌನ್) ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಹೊಸನಗರ ಮೆಸ್ಕಾಂ (ಮಂವಿಸಕಂ) ಪಾಲನೆ ಮತ್ತು ನಿರ್ವಹಣೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]