ಶಿವಮೊಗ್ಗ: ಮೆಸ್ಕಾಂ ಘಟಕ-2ರ ನಗರ ಉಪವಿಭಾಗ 1ರ ವ್ಯಾಪ್ತಿಯಲ್ಲಿ ರಾಘವೇಂದ್ರ ಸ್ವಾಮಿ ಮಠದ ರಸ್ತೆ ಜಿಲ್ಲೆಯ ಪಂಚಾಯಿತಿ ಎದುರಿನಲ್ಲಿ ಸ್ಪನ್ ಪೋಲ್ ಸ್ಥಳಾಂತರಿಸುವ ಕಾಮಗಾರಿಯು ಜಾರಿಯಲ್ಲಿದೆ. ಈ ಕಾರಣದಿಂದಾಗಿ ಜೂನ್ 29,ಭಾನುವಾರದಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ಹಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ಸರಬರಾಜು ಕಡಿತಗೊಳ್ಳಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
- ರಾಘವೇಂದ್ರ ಸ್ವಾಮಿ ಮಠದ ರಸ್ತೆ
- ತಿಲಕ್‌ನಗರ
- ರತ್ನಮ್ಮ ಮಾಧವ್‌ರಾವ್ ರಸ್ತೆ
- ಕುವೆಂಪು ರಸ್ತೆ
- ಪಾರ್ಕ್ ಬಡಾವಣೆ
- ದುರ್ಗಿಗುಡಿ
- ಶಿವಮೂರ್ತಿ ಸರ್ಕಲ್
- ಜಿಲ್ಲಾ ಪಂಚಾಯಿತಿ ರಸ್ತೆ ಸುತ್ತಮುತ್ತಲಿನ ಪ್ರದೇಶ
ಆಲ್ಕೊಳ ವಿ.ವಿ. ಕೇಂದ್ರದ ಎ.ಎಫ್-8 ಫೀಡರ್‌ನಲ್ಲಿ ತುರ್ತು ಕಾಮಗಾರಿ: ಬೆಳಿಗ್ಗೆ 9 ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯ
ಕಾರಣ: ಎ.ಎಫ್-8 ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
- ಲಕ್ಷೀಪುರ
- ಕೆಂಚಪ್ಪ ಲೇಔಟ್
- ಎನ್.ಎಂ.ಸಿ. ಕಾಂಪೌಂಡ್
- ಸೂಡಾ ಕಚೇರಿ
- ಪೊಲೀಸ್ ಚೌಕಿ
- ಸವಿ ಬೇಕರಿ ಎದುರು
- 100 ಅಡಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶ
ಮೆಸ್ಕಾಂ ಪ್ರಕಟಣೆಯಂತೆ, ಸಾರ್ವಜನಿಕರು ಈ ತಾತ್ಕಾಲಿಕ ತೊಂದರೆಗೆ ಸಹಕರಿಸಬೇಕೆಂದು ಕೋರಲಾಗಿದೆ. ಕಾಮಗಾರಿ ಪೂರ್ಣಗೊಂಡ ತಕ್ಷಣ ವಿದ್ಯುತ್ ಸರಬರಾಜು ಪುನಃ ಆರಂಭಗೊಳ್ಳಲಿದೆ.
Read More :ವಾಹನ ಖರೀದಿಗೆ ಸಿಗಲಿದೆ ₹3 ಲಕ್ಷ ಸಬ್ಸಿಡಿ! ‘ಸ್ವಾವಲಂಬಿ ಸಾರಥಿ’ ಯೋಜನೆಗೆ ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ !
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650