ಎನ್.ಆರ್.ಪುರ ; ವಿದ್ಯುತ್ ಸ್ಪರ್ಶಿಸಿ ಪವರ್ ಮ್ಯಾನ್ ಮೃ*ತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹೊನ್ನೆಕೊಪ್ಪ ಗ್ರಾಮದಲ್ಲಿಂದು ನಡೆದಿದೆ.
ಮೃ*ತನನ್ನು ಬಾಗಲಕೋಟೆ ಮೂಲದ ಪ್ರವೀಣ್ (26) ಎಂದು ಗುರುತಿಸಲಾಗಿದೆ. ಕಳೆದ ಒಂದೂವರೆ ತಿಂಗಳ ಹಿಂದಷ್ಟೆ ಪ್ರವೀಣ್ ಮದುವೆಯಾಗಿದ್ದನು.
ವಿದ್ಯುತ್ ಲೈನ್ ದುರಸ್ಥಿಗೆ ಕಂಬ ಹತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಕಂಬ ಹತ್ತಿ ಫ್ಯೂಸ್ ಹಾಕುವ ವೇಳೆ ಪ್ರವೀಣ್ ಗೆ ವಿದ್ಯುತ್ ಶಾಕ್ ಹೊಡೆದು ಕೆಳಗೆ ಬಿದ್ದಿದ್ದನು. ಕೆಳಗೆ ಬಿದ್ದು ಒದ್ದಾಡುತ್ತಿದ್ದ ಪ್ರವೀಣ್ ನನ್ನು ಕೂಡಲೇ ಸ್ಥಳೀಯರು ಹಾಗೂ ಇತರ ಸಿಬ್ಬಂದಿಗಳು ಆಸ್ಪತ್ರೆ ದಾಖಲಿಸಲು ಕೊಂಡೊಯ್ದಿದ್ದರು. ಆದರೆ ತೀವ್ರ ಅಸ್ವಸ್ಥತನಾಗಿದ್ದ ಪ್ರವೀಣ್ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.
ಈ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.