Chikmagaluru News

ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ ; ಒಂದೂವರೆ ತಿಂಗಳ ಹಿಂದಷ್ಟೇ ಹಸೆಮಣೆ ಏರಿದ್ದ ಪವರ್ ಮ್ಯಾನ್ ಸಾ*ವು !

ಎನ್.ಆರ್.ಪುರ ; ವಿದ್ಯುತ್ ಸ್ಪರ್ಶಿಸಿ ಪವರ್ ಮ್ಯಾನ್ ಮೃ*ತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹೊನ್ನೆಕೊಪ್ಪ ಗ್ರಾಮದಲ್ಲಿಂದು ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಮೃ*ತನನ್ನು ಬಾಗಲಕೋಟೆ ಮೂಲದ ಪ್ರವೀಣ್ (26) ಎಂದು ಗುರುತಿಸಲಾಗಿದೆ. ಕಳೆದ ಒಂದೂವರೆ ತಿಂಗಳ ಹಿಂದಷ್ಟೆ ಪ್ರವೀಣ್ ಮದುವೆಯಾಗಿದ್ದನು.

ವಿದ್ಯುತ್ ಲೈನ್ ದುರಸ್ಥಿಗೆ ಕಂಬ ಹತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಕಂಬ ಹತ್ತಿ ಫ್ಯೂಸ್ ಹಾಕುವ ವೇಳೆ ಪ್ರವೀಣ್‌ ಗೆ ವಿದ್ಯುತ್ ಶಾಕ್ ಹೊಡೆದು ಕೆಳಗೆ ಬಿದ್ದಿದ್ದನು. ಕೆಳಗೆ ಬಿದ್ದು ಒದ್ದಾಡುತ್ತಿದ್ದ ಪ್ರವೀಣ್ ನನ್ನ‌ು ಕೂಡಲೇ ಸ್ಥಳೀಯರು ಹಾಗೂ ಇತ‌ರ ಸಿಬ್ಬಂದಿಗಳು ಆಸ್ಪತ್ರೆ ದಾಖಲಿಸಲು ಕೊಂಡೊಯ್ದಿದ್ದರು. ಆದರೆ ತೀವ್ರ ಅಸ್ವಸ್ಥತನಾಗಿದ್ದ ಪ್ರವೀಣ್ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!