ಅಕ್ಟೋಬರ್ 18 ರಂದು ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

Written by Koushik G K

Published on:

ಶಿವಮೊಗ್ಗ:ಶಿವಮೊಗ್ಗ ನಗರದಲ್ಲಿ ಅಕ್ಟೋಬರ್ 18 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಎಫ್-8, ಎಎಫ್-12 ಮತ್ತು ಎಎಫ್-13 ಫೀಡರ್‌ಗಳಲ್ಲಿ ಮೆಸ್ಕಾಂ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಈ ವಿದ್ಯುತ್ ವ್ಯತ್ಯಯ ಜರುಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಯಾವ ಪ್ರದೇಶಗಳಿಗೆ ಪರಿಣಾಮ:

ಈ ಕಾಮಗಾರಿಯ ಪರಿಣಾಮವಾಗಿ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ:
ಶಿವಪ್ಪನಾಯಕ ಬಡಾವಣೆ, ಜಯದೇವ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಸಹ್ಯಾದ್ರಿ ನಗರ, ಜೆ.ಹೆಚ್. ಪಟೇಲ್ ಬಡಾವಣೆಯ ಎ, ಬಿ, ಸಿ, ಡಿ, ಈ ಬ್ಲಾಕ್‌ಗಳು, ಮುನಿಯಪ್ಪ ಲೇಔಟ್, ಸಂಗೊಳ್ಳಿ ರಾಯಣ್ಣ ಲೇಔಟ್, ರವಿಶಂಕರ್ ಗುರುಜಿ ಶಾಲೆ ಸುತ್ತಮುತ್ತ, ಸೋಮಿನಕೊಪ್ಪ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್, ಎಂಎಂಎಸ್ ಲೇಔಟ್, ಸೋಮನಾಥ ಲೇಔಟ್, ಭೋವಿ ಕಾಲೋನಿ, ಆದರ್ಶ ನಗರ, ಆಟೋ ಕಾಲೋನಿ, ತಮಿಳು ತಾಯಿ ಭವನ, ಹೊಂಗಿರಣ ಬಡಾವಣೆ, ಸಹಕಾರಿ ನಗರ, ರಾಜೇಶ್ ಲೇಔಟ್, ಗೆಜ್ಜೇಹಳ್ಳಿ, ಹನುಮಂತ ನಗರ, ದೇವಕಾತಿಕೊಪ್ಪ, ಅಂಬೇಡ್ಕರ್ ಕ್ಯಾಂಪ್ ಮತ್ತು ಸುತ್ತಮುತ್ತ ಪ್ರದೇಶಗಳು.

ಮೆಸ್ಕಾಂ ಪ್ರಕಟಣೆಯಲ್ಲಿ, ಸಾರ್ವಜನಿಕರು ಈ ಅವಧಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಹಾಗೂ ಸಹಕರಿಸಲು ವಿನಂತಿಸಲಾಗಿದೆ.

ಖಾಸಗಿ ಬಸ್ ಮತ್ತು ಲಾರಿ ನಡುವೆ ಅಪಘಾತ ; ಇಬ್ಬರಿಗೆ ಗಂಭೀರ ಗಾಯ !

Leave a Comment