ತೀರ್ಥಹಳ್ಳಿ:ತೀರ್ಥಹಳ್ಳಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವೆಡೆಗಳಲ್ಲಿ ಶನಿವಾರ (ಸೆ.20) ದಿನಪೂರ್ತಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ, ಬೆಟ್ಟಮಕ್ಕಿ ತೀರ್ಥಹಳ್ಳಿಯಲ್ಲಿ ನಡೆಯುವ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೆಸ್ಕಾಂ ಇಂಜಿನಿಯರ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಯಾವೆಲ್ಲೆಡೆ ಕರೆಂಟ್ ಇರಲ್ಲ?
ಪ್ರಭಾವಿತ ಪ್ರದೇಶಗಳು:
- ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಪ್ರದೇಶಗಳು
- ಮುಳುಬಾಗಿಲು
- ಹೊಸಳ್ಳಿ
- ಹಾರೋಗೊಳಿಗೆ
- ಮೇಲಿನಕುರುವಳ್ಳಿ
- ದೇವಂಗಿ
- ಬಸವಾನಿ
- ಮೇಳಿಗೆ
- ಕಟ್ಟೆಹಕ್ಕಲು
- ಶೇಡ್ಗಾರು
- ನೆರಟೂರು
- ಆರಗ
- ಸಾಲೂರು
- ನೊಣಬೂರು
- ಅರಳಸುರಳಿ
- ಹೊದಲ
- ಅರಳಾಪುರ
- ತ್ರಿಯಂಭಕಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳು
ವಿದ್ಯುತ್ ವ್ಯತ್ಯಯವು ಬೆಳಗ್ಗೆ 9.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಮುಂದುವರಿಯಲಿದೆ.
ಜನರಿಗೆ ಸೂಚನೆ
ಮೆಸ್ಕಾಂ ಅಧಿಕಾರಿಗಳು ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ವಿ
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650