ಹೊಸನಗರ: ಜುಲೈ 2 ರಂದು ಬೆಳಿಗ್ಗೆ 10:00 ರಿಂದ ಸಂಜೆ 5:00 ಗಂಟೆಯವರೆಗೆ ಹೊಸನಗರ ಪಟ್ಟಣ ಸೇರಿದಂತೆ ಇತರ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು
33 ಕೆ.ವಿ ಸಾಗರ–ಹೊಸನಗರ ವಿದ್ಯುತ್ ಮಾರ್ಗದ ನಿರ್ವಹಣಾ ಕಾರ್ಯದ ಕಾರಣದಿಂದಾಗಿ, ಸಾಗರದಿಂದ ಹೊಸನಗರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ, ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳು ಹಾಗೂ ಹೊಸನಗರ ಪಟ್ಟಣಕ್ಕೆ ವಿದ್ಯುತ್ ಸರಬರಾಜು ಕಡಿತವಾಗಲಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
ವಿದ್ಯುತ್ ವ್ಯತ್ಯಯದಿಂದಾಗಿ ಗ್ರಾಹಕರು ಸಹಕಾರ ನೀಡಬೇಕೆಂದು ಮೆಸ್ಕಾಂ ಇಲಾಖೆ ಮನವಿ ಮಾಡಿದೆ.
Read More :ಹೊಸನಗರ ; ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದ ಆರೋಪಿ ಅಂದರ್ !

