HOSANAGARA ; ಇಂದು (ಡಿ.04) ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 33 ಕೆ.ವಿ ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ-ಹೊಸನಗರ ವಿದ್ಯುತ್ ಮಾರ್ಗದ ಎಂ.ಗುಡ್ಡೆಕೊಪ್ಪ, ಜೇನಿ, ಮಾರುತಿಪುರ, ಕೋಡೂರು, ಮೇಲಿನಬೆಸಿಗೆ, ಸೊನಲೆ ಗ್ರಾಮ ಪಂಚಾಯಿತಿ ಮತ್ತು ಹೊಸನಗರ ಟೌನ್ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ.
ಆದ್ದರಿಂದ ಹೊಸನಗರ ಉಪವಿಭಾಗದ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.