ಶಿವಮೊಗ್ಗ, ಜೂನ್ 21: ನಗರದ ಎಂಆರ್‌ಎಸ್ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ, ಜೂನ್ 24ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಶಿವಮೊಗ್ಗದ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ತ್ರೈಮಾಸಿಕ ನಿರ್ವಹಣಾ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಈ ವಿದ್ಯುತ್ ವ್ಯತ್ಯಯ ಜರುಗಲಿದ್ದು, ಸಾರ್ವಜನಿಕರು ಇದರಿಂದ ಅನಾವಶ್ಯಕ ತೊಂದರೆ ಅನುಭವಿಸದಂತೆ ಮುಂಗಡ ತಯಾರಿ ಮಾಡಿಕೊಂಡುಕೊಳ್ಳುವಂತೆ ವಿನಂತಿಸಲಾಗಿದೆ.
ವಿದ್ಯುತ್ ವ್ಯತ್ಯಯ ಉಂಟಾಗುವ ಪ್ರಮುಖ ಪ್ರದೇಶಗಳು ಹೀಗಿವೆ:
ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂಆರ್‌ಎಸ್ ವಾಟರ್ ಸಪ್ಲೈ, ಎಂಆರ್‌ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿಹೆಚ್ ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹ್ಮದ್ ವೃತ್ತವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯ ರಸ್ತೆ, ಪಾರ್ಕ್ ಬಡಾವಣೆ, ಸರ್ ಎಂವಿ ರಸ್ತೆ (ವೀರಭದ್ರೇಶ್ವರ ಚಿತ್ರಮಂದಿರದಿಂದ ಮಹಾವೀರ್ ವೃತ್ತದವರೆಗೆ), ಬಾಲರಾಜ್ ಅರಸ್ ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂಧಿ ಪಾರ್ಕ್, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಬಾಪೂಜಿ ನಗರ, ಚರ್ಚ್ ಕ್ಯಾಂಪಸ್, ಟಿಜಿಎನ್ ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ, ಮಹಾನಗರ ಪಾಲಿಕೆ ಕಚೇರಿ ಹಾಗೂ ಸುತ್ತಮುತ್ತಲ ಪ್ರದೇಶಗಳು.
ಸಾರ್ವಜನಿಕರಗೆ ಸೂಚನೆ:ಈ ದಿನ ವಿದ್ಯುತ್ ಸೇವೆ ಲಭ್ಯವಿಲ್ಲದಿರುವುದರಿಂದ ವಿದ್ಯುತ್ ಅವಲಂಬಿತ ಕೆಲಸಗಳನ್ನು ಮುಂಚಿತವಾಗಿ ಪೂರೈಸಿಕೊಳ್ಳುವುದು ಉತ್ತಮ. ಅಲ್ಲದೆ, ವೈದ್ಯಕೀಯ ಉಪಕರಣಗಳು ಅಥವಾ ಅಗತ್ಯ ವಿದ್ಯುತ್ ಉಪಕರಣಗಳನ್ನು ಬಳಸುವವರು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ತಿಳಿಸಿದ್ದಾರೆ.
Read More :ಟಿಪ್ ಟಾಪ್ ಬಷೀರ್ ಮನೆ ಮೇಲೆ ED ದಾಳಿ: ಸಾಗರದಲ್ಲಿ 18 ಗಂಟೆಗಳಿಗೂ ಹೆಚ್ಚು ಕಾಲ ತನಿಖೆ!
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.