ಶಿವಮೊಗ್ಗ

ಶಿವಮೊಗ್ಗ ನೂತನ ಡಿಸಿಯಾಗಿ ಪ್ರಕಾಶ್ ಜಿ.ಟಿ. ನಿಟಳಿ ನೇಮಕ

ಶಿವಮೊಗ್ಗ ಜಿಲ್ಲಾಡಳಿತದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಹಾಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

Prakash G T Shivamogga DC

ಶಿವಮೊಗ್ಗ: ಜಿಲ್ಲಾಡಳಿತದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಹಾಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಅವರ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ಪ್ರಕಾಶ್ ಜಿ.ಟಿ. ನಿಟಳಿ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

WhatsApp Group Join Now
Telegram Group Join Now
Instagram Group Join Now

ಪ್ರಭುಲಿಂಗ ಕವಳಿಕಟ್ಟಿ ಅವರಿಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಜವಾಬ್ದಾರಿ ನೀಡಲಾಗಿದೆ. ಕಳೆದ ಜನವರಿಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಅವರು, ಇದೀಗ ಹೊಸ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ.

ಪ್ರಭುಲಿಂಗ ಕವಳಿಕಟ್ಟಿ

ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಪ್ರಕಾಶ್ ಜಿ.ಟಿ. ನಿಟಳಿ ಅವರು ಈ ಹಿಂದೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇದೀಗ ಶಿವಮೊಗ್ಗ ಜಿಲ್ಲೆಯ ಆಡಳಿತದ ಹೊಣೆಗಾರಿಕೆಯನ್ನು ಅವರಿಗೆ ವಹಿಸಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]