RIPPONPETE ; ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ವಿದ್ಯಾರ್ಥಿನಿ ಕು. ಪ್ರಣತಿ ಅಣ್ಣಪ್ಪ ಇಂದು ರಾಮನಗರದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಭಾಗಿಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾವಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣತಿ ಅಣ್ಣಪ್ಪ ಭಾವಗೀತೆಯಲ್ಲಿ ವಿಭಾಗಿಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಳ್ಳುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಭಿನಂದನೆ :
ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಕಾಲೇಜಿಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದ ವಿದ್ಯಾರ್ಥಿನಿ ಕು. ಪ್ರಣತಿ ಅಣ್ಣಪ್ಪಗೆ ಕಾಲೇಜಿನ ಪ್ರಾಚಾರ್ಯ ವಾಸುದೇವ. ಕೆ. ಹೆಚ್., ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಜಿ.ಆರ್ ಗೋಪಾಲಕೃಷ್ಣ, ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರುಗಳು. ಉಪನ್ಯಾಸಕರು ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಥರು ಅಭಿನಂದಿಸಿದ್ದಾರೆ.