ಹೊಸನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಹಿಂದೂ ಸಂಗಮಕ್ಕೆ ಸಿದ್ಧತೆ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತ್‌ಗಳಲ್ಲಿ ಆರ್.ಎಸ್.ಎಸ್. ಕಾರ್ಯಾಲಯ ಪಾಂಚಜನ್ಯದಲ್ಲಿ ಹಿಂದೂ ಸಂಗಮಕ್ಕೆ ಭರದ ಸಿದ್ದತೆ ನಡೆಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ವಿನಯ್‌ಶೆಟ್ಟಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ರಿಪ್ಪನ್‌ಪೇಟೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂ ಸಮಾಜದ ಸಂಘಟನೆ ಸ್ವಾವಲಂಬಿ ಸಂಸ್ಕಾರಯುತ ಮತ್ತು ಸಾಮರಸ್ಯಯುಕ್ತ ಸಮಾಜವನ್ನು ನಿಮಾಣ ಮಾಡುವ ಕಾರ್ಯದಲ್ಲಿ ನಿತರವಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನೂರು ವರ್ಷಗಳು ತುಂಬಿರುವ ಸಂದರ್ಭದಲ್ಲಿ ಹಿಂದೂ ಸಮಾಜ ಸಂಘಟಿಸುವ ಮೂಲಕ ಹಿಂದೂ ಸಂಗಮ ಕಾರ್ಯಕ್ರಮವನ್ನು ತಾಲ್ಲೂಕಿನ ವಿವಿಧ
ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಆಯೋಜಿಸಲಾಗಿದೆ ಎಂದು ವಿವರಿಸಿದರು.

ಹೊಸನಗರ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಆಯ್ದ 17 ಸ್ಥಳಗಳಲ್ಲಿ ಹಿಂದೂ ಸಂಗಮಗಳನ್ನು ಜನವರಿ 22 ರಿಂದ ಫೆಬ್ರವರಿ 8 ರವರೆಗೆ ವಿವಿಧ ದಿನಗಳಂದು ನಡೆಯಲಿದೆ.

ನಮ್ಮ ದೇವಾಲಗಳು ಆಧ್ಯಾತ್ಮಿಕ ಜಾಗೃತಿಯನ್ನು ಮೂಡಿಸುವುದಲ್ಲದೇ ನಮ್ಮ ಧರ್ಮ ಸಂಸ್ಕೃತಿ ಮೌಲ್ಯಗಳನ್ನು ಆಚರಣೆಗೆ ತರುವಲ್ಲಿ ಈ ಜಾಗೃತಿಯು ಶಕ್ತಿ ಕೇಂದ್ರವಾಗಬೇಕು. ವ್ಯಕ್ತಿಯು ತನ್ನ ಕುಟುಂಬದ ಮತ್ತು ಸಮಾಜದ ನಡವಳಿಕೆಯಲ್ಲಿ ಪರಿವರ್ತನೆಯನ್ನು ತರುವಲ್ಲಿ ಜವಾಬ್ದಾರಿಯ ಪಾತ್ರವನ್ನು ನಿರ್ವಹಿಸಬೇಕು.
ಎಲ್ಲಾ ಹಿಂದೂ ಬಾಂಧವರು ಈ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಬೇಕು ತನ್ಮೂಲಕ ಸಮಾಜ ಜಾಗೃತಿಯ ಈ ಕಾರ್ಯಕ್ರಮದಲ್ಲಿ ತಮ್ಮ ಪಾತ್ರವನ್ನು ಅರಿತುಕೊಳ್ಳಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಅಶ್ವತ್ ಮೂಗುಡ್ತಿ, ಚಿದಂಬರ್‌ ರಾವ್ ಕೋಡೂರು, ಧನ್ಯಶ್ರೀ, ರಮೇಶ್, ಎನ್.ಆರ್. ದೇವಾನಂದ, ಧರ್ಮೇಂದ್ರ ಕೊಳವಂಕ, ಪದ್ಮ, ಪೂರ್ಣಿಮಾ ಕಿಣಿ, ಅನಂತಮೂರ್ತಿ, ಸೋಮಶೇಖರ್, ಕೋಟೇಶ್ ಯಡೂರು, ವಸಂತ್‌ ಬೆಳ್ಳೂರು, ಕುಶಾಲ್ ಇನ್ನಿತರರು ಹಾಜರಿದ್ದರು.

Leave a Comment